ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ಆಗ್ರಹಿಸಿ ಪ್ರತಿಭಟನೆ.
ತುಮಕೂರು ಜಿಲ್ಲೆಯ 20 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಂದು ವಾರದಿಂದ ಪೂರ್ಣ ಪ್ರಮಾಣದ ತರಗತಿ ನಡೆಯುತ್ತಿಲ್ಲ.
ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ತರಗತಿ ನಡೆಯುತ್ತಿಲ್ಲ. ತುಮಕೂರು ಜಿಲ್ಲೆಯ 20 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 15000 ಅಧಿಕ ವಿದ್ಯಾರ್ಥಿಗಳು ಇದ್ದು, ಕಳೆದ ಒಂದು ವಾರದಿಂದ ಪೂರ್ಣ ಪ್ರಮಾಣದ ತರಗತಿಗಳು ನಡೆಯುತ್ತಿರುವುದಿಲ್ಲ. 15000 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿದೆ.
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪಾಠ ಪ್ರವಚನಗಳು ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಿನ್ನಡೆ ಉಂಟಾಗಿದ್ದು.
ತುಮಕೂರು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರು 250, ಅತಿಥಿ ಉಪನ್ಯಾಸಕರು 900ಕ್ಕೂ ಅಧಿಕ ಇದ್ದಾರೆ. ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಬೇಕೆಂದು ಸಂಬಂಧಪಟ್ಟಂತಹ ಅಧಿಕಾರಿಗಳ ವಿದ್ಯಾರ್ಥಿಗಳ ಪರವಾಗಿ ಅಭಾವಿಪ ಆಗ್ರಹಿಸುತ್ತದೆ.
ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪ್ರಾಂಶುಪಾಲರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು. ಈ ಪ್ರತಿಭಟನೆಯಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ನಗರ ಕಾರ್ಯದರ್ಶಿ ಪ್ರತಾಪ ಸಿಂಹ, ನಗರ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಅರ್ಪಿತಾ, ಕೇದರಾ, ಓಂಕಾರ್, ಬಸವರಾಜ್, ದೇವರಾಜ್, ಲೋಹಿತ್ ಹಾಗೂ ಇತರರು ಉಪಸ್ಥಿತಿ ಇದ್ದರು.