ತುಮಕೂರು: ಕುಣಿಗಲ್ ಹೆದ್ದಾರಿ ಮರಳೂರು ಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ತುಮಕೂರು ನಗರದ ಪಿ.ಹೆಚ್ ಕಾಲೋನಿ ಯ ನಿವಾಸಿ ಇಮ್ರಾನ್ (35) ಲಾರಿ ಮೆಕಾನಿಕ್ ತಮ್ಮ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ರಸ್ತೆ ದಾಟುವ ಸಂದರ್ಭದಲ್ಲಿ ಖಾಸಗಿ ಗ್ಯಾಸ್ ಏಜೆನ್ಸಿಯ ಲಾರಿ ಹೊಡೆದುಕೊಂಡು ಹೋದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.