ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು.
ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ ಆದರೆ ಇಂದು ತುಮಕೂರು ನಗರದ ರಿಂಗ್ ರಸ್ತೆಯಲ್ಲಿರುವ ನೈಪ್ ಪ್ಯಾಲೇಸ್ ಬಳಿ ಸಂಜೆ 6:30 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಮಾರು 60 ವರ್ಷದ ರಂಗಸ್ವಾಮಿರವರು ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಅತಿ ವೇಗವಾಗಿ ಬಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.
ಇನ್ನು ಘಟನೆಯಲ್ಲಿ ತಿಪಟೂರು ಮೂಲದ ಬೈಕ್ ಸವಾರನಿಗೂ ಸಹ ಪೆಟ್ಟಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮನೆ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ರಂಗಸ್ವಾಮಿ, ಅಪಘಾತ ನಡೆದ ಸ್ಥಳದಿಂದ ಕೇವಲ 20 ಮೀಟರ್ ದೂರದಲ್ಲಿ ಮನೆ ಸಹ ಇದ್ದು ಕೇವಲ 10 ಸೆಕೆಂಡ್ ನಲ್ಲಿ ಮನೆಗೆ ತಲುಪಬೇಕಾಗಿದ್ದ ವ್ಯಕ್ತಿ ಮನೆ ಮುಂದೆಯೇ ಜೀವ ಬಿಟ್ಟಿರುವುದು ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಮತ್ತಷ್ಟು ದುಃಖಿತರನ್ನಾಗಿಸಿದೆ.