ಸ್ವಾತಂತ್ರ‍್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೮ನೇ ಜನ್ಮದಿನಾಚರಣೆ ಕಾರ್ಯಕ್ರಮ
ತುಮಕೂರು: ಎಐಡಿಎಸ್‌ಓ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ಸ್ವಾತಂತ್ರ‍್ಯಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೮ನೇ ಜನ್ಮದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ಮುಂದೆ ಮತ್ತು ವಿವಿಧ ಶಾಲಾ -ಕಾಲೇಜುಗಳಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿ ಅವರ ಜೀವನ ಹೋರಾಟದ ಪ್ರಚಾರ ಕಾರ್ಯಕ್ರಮ ಅತ್ಯಂತ
ಸ್ಪೂರ್ತಿದಾಯಕವಾಗಿ ನಡೆಯಿತು.

ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ ಅವರು ಮಾತನಾಡಿ… &quoಣ;ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ‍್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊAದು
ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ‍್ಯ ಸAಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್.
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ
ಸ್ವಾತಂತ್ರ‍್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕತೆ ಇದೆ ಎಂದು ಹೇಳಿದರು. ಮುಂದುವರೆದು, ಪ್ರಸಕ್ತ ಸಾಮಾಜಿಕ
ವ್ಯವಸ್ಥೆಯಲ್ಲಿ ಶಿಕ್ಷಣ ಖಾಸಗೀಕರಣ, ನಿರುದ್ಯೋಗ ಮತ್ತು ಹೆಚ್ಚುತ್ತಿರುವ ಹೆಣ್ಣು ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಇವೆಲ್ಲವೂ ಕೊನೆಯಾಗಬೇಕು. ಸಾಮಾಜಿಕ ವಾತಾವರಣವು ಕೆಟ್ಟ ಕೆಟ್ಟ ಸಿನಿಮಾ, ಅಶ್ಲೀಲತೆ ಇವುಗಳಿಂದ ಇವತ್ತಿನ ವಿದ್ಯಾರ್ಥಿಗಳ ಮನಸ್ಸು
ಹಾಳಾಗುತ್ತದೆ. ಹಾಗೂ ಮಾನವೀಯ ಮೌಲ್ಯಗಳು ಕುಸಿಯುತ್ತಿದೆ. ಆದ್ದರಿಂದ ಎಐಡಿಎಸ್‌ಓ
ವಿದ್ಯಾರ್ಥಿ ಸಂಘಟನೆಯು ವಿದ್ಯಾರ್ಥಿಗಳಲ್ಲಿ ಶಿಕ್ಷಣ – ಮಾನವತೆ – ಸಂಸ್ಕೃತಿ ಉಳಿಸಲು ಈ ಎಲ್ಲಾ
ಕಾರ್ಯಕ್ರಮಗಳು ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಭರತ್, ಸುಮಂತ್, ಹಾಗೂ
ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.