ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರು:ಶಿಕ್ಷಣ ಇಲಾಖೆಯವತಿಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ ಕುಂದುಕೊರತೆ ಸಭೆ ನಡೆಸಲು ಸೂಚನೆ ನೀಡಬೇಕೆಂದು ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ಅವರ ನೇತೃತ್ವದಲ್ಲಿ ಸಮಿತಿಯ ಕಾರ್ಯಕರ್ತರು ಸರಕಾರದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿಗೆ ಆಗಮಿಸಿದ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ಸರಕಾರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಲ್ಲಿ ಶೇ90ರಷ್ಟು ಮಂದಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಆದರೆ ಸರಕಾರಿ ಶಾಲೆಯ ಕೆಲ ಶಿಕ್ಷಕರು ಸಂಘದ ಹೆಸರಿನಲ್ಲಿ ಶಾಲೆಗಳಲ್ಲಿ ಪಾಠ ಪ್ರವಚನ ಮಾಡುವುದನ್ನು ಬಿಟ್ಟು ಸಭೆ, ಸಮಾರಂಭ,ಮಂತ್ರಿಗಳ ಭೇಟಿ,ಜೊತೆಗೆ ಸರಕಾರಿ ಕಚೇರಿಗಳಿಗೆ ಅಲೆಯುತ್ತಾ ಕಾಲ ಕಳೆಯುವುದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವೆಂಬುದು ಮರೀಚಿಕೆಯಾಗಿದೆ.ಇಂತಹ ಸ್ವಯಂ ಘೋಷಿತ ಪದಾಧಿಕಾರಿಗಳಾಗಿರುವ ಶಿಕ್ಷಕರ ಅಕ್ರಮ ಚಟವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸರಕಾರಿ ಶಾಲೆಗಳು ಉಳಿಯಬೇಕೆಂಬ ಆಶಯವನ್ನು ದಲಿತ ಸಂಘಟನೆ ಹೊಂದಿರುವ ರೀತಿಯೇ, ಅಲ್ಲಿ ಕಲಿಯುತ್ತಿರುವ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕೆಂಬುದು ನಮ್ಮ ಸಂಘಟನೆಯ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದಲ್ಲಿ ಬಿಇಓ ನೇತೃತ್ವದಲ್ಲಿ, ಜಿಲ್ಲಾ ಮಟ್ಟದಲ್ಲಿ ಡಿಡಿಪಿಐ ಅವರ ಅಧ್ಯಕ್ಷತೆಯಲ್ಲಿ,ದಲಿತರ ಮಕ್ಕಳ ಶೈಕ್ಷಣ ಕ ಅಭಿವೃದ್ದಿಯ ದೃಷ್ಟಿಯಿಂದ ಕನಿಷ್ಠ ವರ್ಷಕ್ಕೆ ಎರಡು ಬಾರಿಯಾದರೂ ದಲಿತರ ಕುಂದುಕೊರತೆ ಸಭೆ ನಡೆಸಿ, ದಲಿತ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ, ಅವರ ಸಲಹೆಗಳನ್ನು ಪರಿಗಣ ಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಬೇಕೆಂಬುದಾಗಿ ಮನವಿಯಲ್ಲಿ ಕೋರಲಾಗಿದೆ.
ಈಗಾಗಲೇ ಪೊಲೀಸ್ ಇಲಾಖೆ, ಕಂದಾಯ ಇಲಾಖೆಗಳು ದಲಿತರ ಕುಂದುಕೊರತೆ ಸಭೆಯನ್ನು ನಡೆಸುತ್ತಿವೆ. ಹಾಗೆಯೇ ಶಿಕ್ಷಣ ಇಲಾಖೆಯೂ ಕುಂದುಕೊರತೆ ಸಭೆಯನ್ನು ನಡೆಸಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಮನವಿ ಸಲ್ಲಿಸುವ ವೇಳೆ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ಯುವ ಘಟಕದ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಪಾಧ್ಯಕ್ಷ ಜಿ.ಸಿ.ಸಿದ್ದಲಿಂಗಯ್ಯ, ಜಿಲ್ಲಾ ಗೌರವಾಧ್ಯಕ್ಷ ಎ.ಎಸ್.ರಾಜಣ್ಣ, ತಾಲೂಕು ಅಧ್ಯಕ್ಷ ರಂಗಸ್ವಾಮಿ ಕೊತ್ತಿಹಳ್ಳಿ, ಕುಚಂಗಿ ಶಿವರಾಜು, ಕೆ.ಜಿ.ಸಿದ್ದಲಿಂಗಯ್ಯ ಮತ್ತಿತರರು ಜೊತೆಗಿದ್ದರು.