ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ
ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಿಕೆಗೆ ಬಡವ, ಶ್ರೀಮಂತ ಎಂಬ ಭೇದ-
ಭಾವ ಇರುವುದಿಲ್ಲ. ದೇವರು ಎಲ್ಲರಿಗೂ ಒಂದೇ ರೀತಿಯಾದ ಬುದ್ಧಿಶಕ್ತಿಯನ್ನು ಕೊಟ್ಟಿರುತ್ತಾನೆ. ಆ ಬುದ್ಧಿಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು.
ಉತ್ತಮ ಶಿಕ್ಷಣ ಪಡೆಯಲು ಲಭ್ಯವಿರುವ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಅಂಕ, ಪದವಿ ಮನುಷ್ಯನ ವ್ಯಕ್ತಿತ್ವದ ಮಾನದಂಡವಲ್ಲ.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ ಅತ್ಯುತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯೆ ಸಾಧಕರ ಸ್ವತ್ತು ಹೊರತು ಸೋಮಾರಿಗಳದ್ದಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕಲಿತರೆ ಎಲ್ಲರಿಗೂ ವಿದ್ಯಾದೇವತೆ ಸರಸ್ವತಿ ಒಲಿಯುತ್ತಾಳೆ ಎಂದ ಅವರು, ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೆöÊನ್ ಅವರು ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂದು ಹೇಳಿದ್ದಾರೆ. ಅವರ ಮಾತು ಅಕ್ಷರಶಃ ಸತ್ಯ. ಕಲಿಕೆ ಎಂಬುದು ನಿAತ ನೀರಲ್ಲ. ಪ್ರತಿನಿತ್ಯವೂ ಹೊಸತನ್ನು ಕಲಿಯುವುದು ಬಹಳಷ್ಟಿದೆ ಎಂದರು. ಶಾಲಾ-ಕಾಲೇಜುಗಳಲ್ಲಿ ಕ್ರೀಡಾ ಸ್ಪರ್ಧೆ ಆಯೋಜನೆ ಸಾಮಾನ್ಯ. ಆದರೆ ಸಾಂಸ್ಕöÈತಿಕ ಸ್ಪರ್ಧೆಗಳು ನಡೆಸುತ್ತಿರುವುದು ವಿಶೇಷವಾಗಿದೆ. ಸ್ಪರ್ಧೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ, ಪಾಲ್ಗೊಳ್ಳುವುದು ಮುಖ್ಯ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ ಎಂದರು.
ಜಿಲ್ಲೆಯ ಪದವಿ ಪೂರ್ವ ಕಾಲೇಜಗಳಲ್ಲಿ ಬದಲಾವಣೆ ಬಯಸಿ, ಫಲಿತಾಂಶಗಳಲ್ಲಿ ಸಾಧನೆ ಮಾಡುವ ನಿಟ್ಟಿನಲ್ಲಿ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಅವರು ಉತ್ತಮ ಹೆಜ್ಜೆ ಇಡುತ್ತಿದ್ದಾರೆ. ಪ್ರಾಂಶುಪಾಲರು, ಉಪನ್ಯಾಸಕರು ಸಹಕಾರ ನೀಡಿ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾಗಬೇಕು ಎಂದು ಅವರು ತಿಳಿಸಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಪುರುಷೋತ್ತಮ ಬಿಳಿಮಲೆ ನಮ್ಮದು ಬೆಸೆಯುವ ಸಂಸ್ಕöÈತಿ. ಎಲ್ಲವನ್ನು ಬೆಸೆದುಕೊಂಡು ನಾಡನ್ನು ರೂಪಿಸಿಕೊಂಡಿದ್ದೇವೆ. ಹಾಗಾಗಿ ನಾವು ಕೋಮುವಾದಿಗಳಾಗದೆ ಜಾತಿವಾದಿಗಳಾಗದೆ ಕನ್ನಡವಾದಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರಾದೇಶಿಕವಾಗಿ ನೂರಾರು ಸಂಸ್ಕöÈತಿಗಳು ನಮ್ಮ ನಾಡಿನಲ್ಲಿಯೇ ಇವೆ. ಇಂತಹ ವೈವಿಧ್ಯಮಯ ಸಂಸ್ಕöÈತಿ ನಡುವೆ
ಏಕ ಸಂಸ್ಕೃತಿಯ ಏರಿಕೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ನಾವು ಅವಕಾಶ ಕೊಡಬಾರದು ಎಂದರಲ್ಲದೆ, ೨೦೧೧ರ ಜನಗಣತಿ
ಪ್ರಕಾರ ದೇಶದಲ್ಲಿ ೧೯,೫೬೦ ತಾಯ್ನುಡಿಗಳು ದಾಖಲಾಗಿವೆ. ಈ ಎಲ್ಲವೂ ಸಂಸ್ಕöÈತಿಗಳೇ. ನಮ್ಮದು ವೈವಿಧ್ಯಮಯ ಭಾರತ.
ಏಕ ಸಂಸ್ಕöÈತಿಯದ್ದಲ್ಲ ಎಂದು ಹೇಳಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಸೃತ ಕವಿ ಡಾ: ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡಿ, ಸಾಂಸ್ಕೃತಿಕ ಬದುಕು ಬಡವಾದರೆ ನಾವೆಷ್ಟೇ ಶ್ರೀಮಂತರಾದರೂ ಪ್ರಯೋಜನವಿಲ್ಲ. ಹಾಗಾಗಿ ಸಾಂಸ್ಕೃತಿಕ ಕ್ರಾಂತಿ ನಡೆಯಬೇಕಿದೆ ಎಂದು ತಿಳಿಸಿದರಲ್ಲದೆ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬರಬೇಕಾದರೆ ಶತಮಾನಗಳ ತ್ಯಾಗ, ಬಲಿದಾನವಿದೆ. ಪ್ರಜಾಪ್ರಭುತ್ವದ
ಧರ್ಮ ಉಳಿಯಲು ಸಾಂಸ್ಕೃತಿಕ ನಾಯಕರು ಬೇಕು ಎಂದು ತಿಳಿಸಿದರು.
ಅಧ್ಯಕ್ಷತೆವಹಿಸಿದ್ದ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಕಲೆ, ಸಾಹಿತ್ಯ, ಕ್ರೀಡೆ ಇಲ್ಲದ ಜೀವನ ಸತ್ತಂತೆ. ವಿದ್ಯಾರ್ಥಿ ಜೀವನದಲ್ಲಿ
ವಿದ್ಯಾರ್ಥಿಗಳು ಈ ಎಲ್ಲ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು
ಸಲಹೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಭಾಷೆಗಳು, ಸಂಸ್ಕೃತಿಗಳು ನಶಿಸುತ್ತಿವೆ. ಇಂದಿನ ಪೀಳಿಗೆಗೂ ನಮಗೂ ಅಜಗಜಾಂತರ
ವ್ಯತ್ಯಾಸಗಳು ಕಂಡು ಬರುತ್ತಿವೆ. ಹಾಗಾಗಿ ನಮಗೂ ಇಂದಿನ ಪೀಳಿಗೆಗೂ ಸಾಂಸ್ಸೃತಿಕ ಸೇತುವೆ ಕಟ್ಟುವ ಅನಿವಾರ್ಯತೆ ಇದೆ ಎಂದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್‌ರೆಡ್ಡಿ, ಹರಿಕಥಾ
ವಿದ್ವಾನ್ ಡಾ: ಲಕ್ಷ÷್ಮಣದಾಸ್, ಬಸವರಾಜು, ಮಹಾಲಿಂಗೇಶ್, ಮಲ್ಲಯ್ಯ, ಡಾ: ಸದಾಶಿವಯ್ಯ, ಚಂದ್ರಶೇಖರ್ ಆರಾಧ್ಯ, ರವಿಕುಮಾರ್,
ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.