breaking newsPolitics PublicPUBLICSOCIAL ACTIVIST

Ambedkar association organized protest in front of the DC office

Ambedkar association organized protest in front of the DC office

ತುಮಕೂರು: ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನಾಗಿ ಎ.ಸರೋಜದೇವಿ ಅವರನ್ನೇ ಮುಂದುವರೆಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸೇನೆ (ರಿ.) ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ಧೇಶಿಸಿ ಮಾತನಾಡಿದ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಎ.ಸಿ.ಕೆಂಪರಾಜು, ಜಿಲ್ಲೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಎ. ಸರೋಜದೇವಿ ಅವರು ಸಾರ್ವಜನಿಕರಿಗೆ ಹಾಗೂ ಫಲಾನುಭವಿಗಳಿಗೆ ತೊಂದರೆಯಾಗದಂತೆ ಸೌಹಾರ್ಧಯುತವಾಗಿ ವರ್ತಿಸುತ್ತಿದ್ದರು, ಜೊತೆಗೆ ಫಲಾನುಭವಿಗಳನ್ನು ಕಾಯಿಸದೆ ವಿಳಂಬ ಮಾಡದೆ ತುರ್ತಾಗಿ ಕೆಲಸ ಮಾಡಿಕೊಡುತ್ತಾ ಸ್ಪಂಧಿಸುತ್ತಿದ್ದರು ಎಂದರು.


ಈಗ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಬಾಲಕೃಷ್ಣ ಅವರನ್ನು ಜಿಲ್ಲಾ ವ್ಯವಸ್ಥಾಪಕರನ್ನಾಗಿ ನಿಯೋಜನೆ ಮಾಡಿದ್ದಾರೆ. ಬಾಲಕೃಷ್ಣ ಅವರು ಈಗಾಗಲೇ ರೇಷ್ಮೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಹುದ್ದೆಯನ್ನೂ ನಿರ್ವಹಿಸುತ್ತಿದ್ದಾರೆ.

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಇವರನ್ನು ಪ್ರಭಾರ ಜಿಲ್ಲಾ ವ್ಯವಸ್ಥಾಪಕರನ್ನಾಗಿ ನಿಯೋಜಿಸಿದ್ದು ಬಾಲಕೃಷ್ಣ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಬರುವ ಯೋಜನೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಇಂತಹವರನ್ನು ಅಭಿವೃದ್ಧಿ ನಿಗಮಕ್ಕೆ ನಿಯೋಜನೆ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.


ಬಾಲಕೃಷ್ಣ ಅವರು ಮೂರು ಇಲಾಖೆಗಳಲ್ಲಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ, ಸಾರ್ವಜನಿಕ ಹಿತಾಸಕ್ತಿಯಿಂದ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಬಹಳಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಮತ್ತು ಅನುಭವವಿರುವ ಎ. ಸರೋಜದೇವಿ ಅವರನ್ನೇ ಮುಂದುವರೆಸಬೇಕು ಎಂದು ಮನವಿ ಮಾಡಿದರು.


ಜಿಲ್ಲಾಡಳಿತ ಹಾಗೂ ನಿಗಮದ ವ್ಯವಸ್ಥಾಪಕರು ಎ. ಸರೋಜದೇವಿಯವರನ್ನು ಜಿಲ್ಲಾ ವ್ಯವಸ್ಥಾಪಕರ ಹುದ್ದೆಗೆ ಮರು ನೇಮಕ ಮಾಡದೇ ಇದ್ದರೆ ಎಲ್ಲಾ ದಲಿತ ಪರ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳ ವತಿಯಿಂದ ಮುಂದಿನ ದಿನಗಳಲ್ಲಿ ಅನಿರ್ದಿಷ್ಟವಾದಿ ಧರಣ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ತುಮಕೂರು ತಾಲ್ಲೂಕು ಅಧ್ಯಕ್ಷ ಜಿ.ಕೆ.ಮಂಜುನಾಥ್, ಗುಬ್ಬಿ ತಾಲ್ಲೂಕು ಅಧ್ಯಕ್ಷ ಎಂ.ಡಿ.ಶಿವಣ್ಣ, ಕೊರಟಗೆರೆ ಮಾರುತಿ, ಕುಣ ಗಲ್ ಮಂಜುನಾಥ್, ಆಟೋ ಘಟಕದ ನಗರ ಉಪಾಧ್ಯಕ್ಷ ಶಿವರಾಜ್, ಅಂಜಿನಪ್ಪ, ಆರ್.ಸಿ.ಗೋಪಾಲ್, ಡಿಎಸ್‍ಎಸ್ ಮಹಿಳಾ ಜಿಲ್ಲಾಧ್ಯಕ್ಷೆ ರತ್ನಮ್ಮ, ಹಿರಿಯ ಸಾಹಿತಿ ಹೋರಾಟಗಾರ ರಾಮಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

Share this post

About the author

Leave a Reply

Your email address will not be published. Required fields are marked *