ತುಮಕೂರು: ರುಡ್‌ಸೆಟ್ ಸಂಸ್ಥೆಯ ವತಿಯಿಂದ
ಹಮ್ಮಿಕೊಂಡಿರುವ ಫಾಸ್ಟ್ಫುಡ್ ತಯಾರಿಕೆ ಕುರಿತ 10 ದಿನಗಳ ಉಚಿತ
ತರಬೇತಿಗೆ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ
ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು,
ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್
ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ
ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು,
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ
ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ
ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು
ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದ್ದು, ಹೆಚ್ಚಿನ
ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042 – ೯೩೮೦೧೬೨೦೪೨/ 9740982585 – ೯೭೪೦೯೮೨೫೮೫ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ
ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.