ನಗರಕ್ಕಿಂದು ಮುಖ್ಯಮಂತ್ರಿಗಳ ಭೇಟಿ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ.
ತುಮಕೂರು: ಮುಖ್ಯಮಂತ್ರಿಗಳು ಸೆಪ್ಟೆಂಬರ್ 25ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಕಾರ್ಯಕ್ರಮ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯದಳದಿಂದ ಪರಿಶೀಲನೆ ನಡೆಸಲಾಗಿದೆ. ವೇದಿಕೆ ಮೇಲೆ ವಿಶೇಷ ಆಹ್ವಾನಿತರಿಗಾಗಿ 30, ವೇದಿಕೆ ಮುಂಭಾಗದಲ್ಲಿ ವಿವಿಧ ಗಣ್ಯರಿಗೆ ಹಾಗೂ ಸಾರ್ವಜನಿಕರಿಗಾಗಿ 600 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪೂರ್‍ವಾಡ್ ಮಾತನಾಡಿ, ಕಾರ್ಯಕ್ರಮದ ಬಂದೋಬಸ್ತ್‍ಗಾಗಿ 300 ಮಂದಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಗಣ್ಯರುಗಳ ವಾಹನ ನಿಲುಗಡೆಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಡಿಸಿ ಕೆ.ಚೆನ್ನಬಸಪ್ಪ, ಸಿಇಓ ಡಾ: ಕೆ. ವಿದ್ಯಾಕುಮಾರಿ, ಡಿಎಸ್ ಡಾ: ವೀರಭದ್ರಯ್ಯ, ಡಿಹೆಚ್‍ಓ ಡಾ: ನಾಗೇಂದ್ರಪ್ಪ ಮತ್ತಿತರ ಅಧಿಕಾರಿಗಳು ಹಾಜರಿದ್ದರು.