breaking newsPolicePolitics Public

Construction of a new Police Station by Minister JC Madhuswamy

Construction of a new Police Station by Minister JC Madhuswamy

ತುಮಕೂರು- ಇಲ್ಲಿನ ನಗರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.


ನಗರದ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿದ್ದ ನಗರಠಾಣೆ ಕಟ್ಟಡ ಶಿಥಿಲಗೊಂಡಿದ್ದರಿಂದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಸಚಿವರು ಅಧಿಕೃತವಾಗಿ ಚಾಲನೆ ನೀಡಿದರು.


ನಂತರ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ರಾಜ್ಯದಲ್ಲಿ ಪೆÇಲೀಸ್ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಮುಂದಿನ 2 ವರ್ಷದಲ್ಲಿ ಈ ಕಾರ್ಯಕ್ರಮವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದರು.


ಜಿಲ್ಲೆಯಲ್ಲಿ 5 ನೂತನ ಪೆÇಲೀಸ್ ಠಾಣೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರ ತುಮಕೂರು ನಗರದಲ್ಲಿ 2 ಪೆÇಲೀಸ್ ಠಾಣೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 2 ಪೆÇಲೀಸ್ ಠಾಣೆ ಸೇರಿದಂತೆ ಒಟ್ಟು 5 ಹೊಸ ಠಾಣೆಗಳ ನಿರ್ಮಾಣವಾಗಲಿದೆ ಎಂದರು.


ಒಂದು ಪೆÇಲೀಸ್ ಠಾಣೆ ನಿರ್ಮಾಣಕ್ಕೆ 2 ಕೋಟಿ ರೂ.ವರೆಗೆ ಅನುದಾನ ಮಂಜೂರು ಮಾಡಲಾಗುತ್ತಿದ್ದು, ಸರ್ಕಲ್ ಇನ್ಸ್‍ಪೆಕ್ಟರ್ ಇರುವ ಪೆÇಲೀಸ್ ಠಾಣೆಗಳನ್ನು 2 ಅಂತಸ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸಬ್‍ಇನ್ಸ್‍ಪೆಕ್ಟರ್ ಠಾಣೆಗಳಿಗೆ ಒಂದು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.


ಈ ಸಂದರ್ಭದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿಗಣೇಶ್, ಮೇಯರ್ ಬಿ.ಜಿ. ಕೃಷ್ಣಪ್ಪ, ಪಾಲಿಕೆ ಸದಸ್ಯ ಮಹೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್, ಡಿವೈಎಸ್ಪಿ ಶ್ರೀನಿವಾಸ್, ಸರ್ಕಲ್ ಇನ್ಸ್‍ಪೆಕ್ಟರ್‍ಗಳಾದ ನವೀನ್, ಮುನಿರಾಜು, ಪಿಎಸ್‍ಐಗಳಾದ ನವೀನ್, ಗಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.

Share this post

About the author

Leave a Reply

Your email address will not be published. Required fields are marked *