breaking newsPUBLIC

ಒಳಮೀಸಲಾತಿ ಜಾರಿ ಮಾಡಿ ಕಣ್ಣೀರು ಒರೆಸಬೇಕಾದ ಸರ್ಕಾರ ಕಣ್ಣೊರೆಸುವಆಯೋಗ ರಚನೆ ಮಾಡಲು ಹೊರಟಿದೆ: ದಲಿತಮುಖಂಡರ ಅರೋಪ

ಒಳಮೀಸಲಾತಿ ಜಾರಿ ಮಾಡಿ ಕಣ್ಣೀರು ಒರೆಸಬೇಕಾದ ಸರ್ಕಾರ ಕಣ್ಣೊರೆಸುವಆಯೋಗ ರಚನೆ ಮಾಡಲು ಹೊರಟಿದೆ: ದಲಿತಮುಖಂಡರ ಅರೋಪ
‘ಕಣ್ಣೊರೆಸಬೇಡಿ, ಕಣ್ಣಿರು ಒರೆಸುವ ಒಳಮೀಸಲಾತಿ ನೀಡಿ’ ಮೀಸಲಾತಿ ವರ್ಗೀಕರಣ ಜಾರಿಗೆ ಮಾದಿಗ
ಮುಖಂಡರ ಹಕ್ಕೊತ್ತಾಯ


ತುಮಕೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ಪರಿಶೀಲನೆ
ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ
ಆಯೋಗ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಕ್ಕೆ ನಗರದ ದಲಿತ
ಸಮುದಾಯದ ಮುಖಂಡರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಳಮೀಸಲಾತಿ ಜಾರಿ ಮಾಡಿ ಕಣ್ಣೀರು ಒರೆಸಬೇಕಾದ ಸರ್ಕಾರ ಕಣ್ಣೊರೆಸುವ
ಆಯೋಗ ರಚನೆ ಮಾಡಲು ಹೊರಟಿದೆ ಎಂದು ಟೀಕಿಸಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ
ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಒಳಮೀಸಲಾತಿ ವರ್ಗೀಕರಣ ಮಾಡಲು
ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ ಅದನ್ನು ಪಾಲನೆ ಮಾಡದ ರಾಜ್ಯ ಸರ್ಕಾರ
ಮತ್ತೊಂದು ಆಯೋಗ ರಚನೆ ಮಾಡಿ ಕಾಲ ತಳ್ಳುವ ತಂತ್ರ ನಡೆಸಿದೆ. ಸರ್ಕಾರದ
ಈ ತೀರ್ಮಾನ ಮಾದಿಗ ಸಮುದಾಯಕ್ಕೆ ದೊಡ್ಡ ಹೊಡೆತ ನೀಡಿದೆ ಎಂದರು.


ಹರಿಯಾಣ, ಮತ್ತಿತರ ರಾಜ್ಯಗಳು ಒಳಮೀಸಲಾರಿ ಜಾರಿಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ,
ಆದರೆ ನಮ್ಮ ಸರ್ಕಾರ ಜಾರಿ ಮಾಡದೆ ತಡೆಹಿಡಿಯುವ ಹುನ್ನಾರ ನಡೆಸಿದೆ. ಸಾಮಾಜಿಕ
ನ್ಯಾಯದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ, ಅಂಕಿಅAಶಗಳ ಕೊರತೆಯ
ನೆಪವೊಡ್ಡಿ ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸಲು ನಿರಾಸಕ್ತಿ
ತೋರುತ್ತಿದ್ದಾರೆ. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ, ಕಾಂತರಾಜು
ವರದಿ, ಮಾಧುಸ್ವಾಮಿ ನೇತೃತ್ವದ ವರದಿ ಜೊತೆಗೆ ೨೦೧೧ರ ಜನಗಣತಿಯಲ್ಲಿ ಅಗತ್ಯ
ದತ್ತಾಂಶ ಲಭ್ಯವಿದ್ದರೂ ಮತ್ತೊಂದು ಆಯೋಗ ರಚನೆ ಮಾಡಲು
ಹೊರಟಿರುವುದು ಮಾದಿಗ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ.
ಸರ್ಕಾರದ ಈ ತೀರ್ಮಾನ ಮಾದಿಗ ಸಮಾಜದಲ್ಲಿ ಆತಂಕ ಸೃಷ್ಟಿ ಮಾಡಿದೆ. ಆಯೋಗ
ರಚನೆ ಮೂಲಕ ಸಮುದಾಯದ ಕಣ್ಣೊರೆಸಿ ಉಪಚುನಾವಣೆ ಗೆಲ್ಲುವ ತಂತ್ರ
ಅನುಸರಿಸುತ್ತಿದೆ ಎಂದು ವೈ.ಹೆಚ್.ಹುಚ್ಚಯ್ಯ ಆರೋಪಿಸಿದರು.


ಹಿರಿಯ ವೈದ್ಯರಾದ ಡಾ.ಲಕ್ಷಿö್ಮÃಕಾಂತ್ ಮಾತನಾಡಿ, ಈಗಿನ ಗೃಹ ಸಚಿವ
ಡಾ.ಜಿ.ಪರಮೇಶ್ವರ ಅಧ್ಯಕ್ಷರಾಗಿದ್ದ ಕಾಂಗ್ರೆಸ್‌ನ ಚುನಾವಣೆ ಪ್ರಣಾಳಿಕೆಯಲ್ಲಿ
ಮೊದಲ ಭರವಸೆ ಒಳಮೀಸಲಾತಿ ಜಾರಿ ಮಾಡುವುದಾಗಿತ್ತು. ಚಿತ್ರದುರ್ಗದ
ಸಭೆಯಲ್ಲೂ ಈ ಬಗ್ಗೆ ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದು ಒಂದೂವರೆ
ವರ್ಷವಾದರೂ ಮೀಸಲಾತಿ ವರ್ಗೀಕರಣದ ಪ್ರಯತ್ನವಾಗಿಲ್ಲ. ಒಳಮೀಸಲಾತಿ ಜಾರಿ
ಮಾಡುವ ಇಚ್ಛಾಶಕ್ತಿ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ಜಾರಿಯಾಗಲು ಬಲಗೈ
ಸಮಾಜದವರು ಬಿಡುತ್ತಿಲ್ಲ ಎಂದು ಆಪಾದಿಸಿದರು.
ದತ್ತಾಂಶ ಕೊರತೆ ಇಲ್ಲ, ಹಲವು ವರದಿಗಳ ಅಂಕಿಅAಶಗಳಿವೆ, ಹಿಂದೆ ಬಿಜೆಪಿ ಸರ್ಕಾರ
ಪರಿಶಿಷ್ಟ ಜಾತಿಗೆ ಶೇಕಡ ೨ರಷ್ಟು ಮೀಸಲಾತಿ ಹೆಚ್ಚು ಮಾಡಿದ್ದು ಲಭ್ಯವಿರುವ
ಅಂಕಿಅAಶದ ಆಧಾರದಲ್ಲೇ. ಆದರೆ ಸರ್ಕಾರ ಈಗ ಮತ್ತೊಂದು ಆಯೋಗ
ರಚನೆಗೆ ಹೊರಟಿರುವುದು ಮೊಸರಿನಲ್ಲಿ ಕಲ್ಲು ಹುಡುಕುವಂತಾಗಿದೆ. ನಾವು
ಯಾರ ಮೀಸಲಾತಿಯನ್ನು ಕಸಿಯುತ್ತಿಲ್ಲ, ನಮ್ಮ ಪಾಲಿನದನ್ನು ನಮಗೆ
ಹಂಚಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟಿನಲ್ಲಿ ಮೀಸಲಾತಿ ಕುರಿತ ವಾದವಿವಾದ ಮಂಡನೆಯಾಗುತ್ತಿರುವ
ಸAದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಟಿಕಲ್ ೩೪೧ ಅಮೇಂಡ್‌ಮೆAಟ್ ಮಾಡಿ ಎಂದು
ಕೇAದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ರಾಜ್ಯ
ಸರ್ಕಾರಕ್ಕೆ ಬದ್ಧತೆ ಇಲ್ಲ ಎಂಬುದನ್ನು ಇದು ತೋರಿಸುತ್ತದೆ ಎಂದು ಡಾ. ಲಕ್ಷ್ಮೀಕಾಂತ್ ಹೇಳಿದರು.

ಕಳೆದ ೪೫ ವರ್ಷಗಳ ದತ್ತಾಂಶ ತೆಗೆದುನೋಡಿದರೆ ಬಲಗೈ
ಸಮುದಾಯದವರೇ ಹೆಚ್ಚಿನ ಸವಲತ್ತು ಪಡೆಯವರಾಗಿದ್ದಾರೆ. ಎಡಗೈ ಹಾಗೂ
ಇತರೆ ನಿರ್ಲಕ್ಷಿತ ಸಮಾಜದವರು ಆಗಿನಿಂದಲೂ ಅನ್ಯಾಯಕ್ಕೊಳಗಾಗಿದ್ದಾರೆ.
ಒಳಮೀಸಲಾತಿ ಜಾರಿಯಲ್ಲಿ ನಿರಾಸಕ್ತಿ ತೋರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ
ಉಪಚುನಾವಣೆಯಲ್ಲಿ ಸಮುದಾಯ ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂದರು.

ಮಾದಿಗ ದಮಡೋರ ಒಳಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಪಾವಗಡ
ಶ್ರೀರಾಮ್ ಮಾತನಾಡಿ, ಒಳಮೀಸಲಾತಿ ಜಾರಿಗಾಗಿ ೩೦ ವರ್ಷಗಳಿಂದ ಹೋರಾಟ
ಮಾಡಿಕೊಂಡು ಬರುತ್ತಿದ್ದೇವೆ, ಆಗಿನಿಂದ ಎಲ್ಲಾ ಸರ್ಕಾರಗಳೂ ನಮಗೆ ಮೋಸ
ಮಾಡಿವೆ. ಒಳಮೀಸಲಾತಿ ವರ್ಗೀಕರಣ ಮಾಡಿ ಜಾರಿ ಮಾಡಲು ಸುಪ್ರೀಂ ಕೋರ್ಟ್ ಆದೇಶ
ನೀಡಿದರೂ, ಜಾರಿ ಮಾಡಲು ಸರ್ಕಾಕ್ಕೆ ಮನಸಿಲ್ಲ, ನಮ್ಮಲ್ಲಿ ೧೦೧ ನಿರ್ಲಕ್ಷಿತ ಜಾತಿಗಳಿವೆ.
ಯಾಕೆ ನಮಗೆ ಅನ್ಯಾಯ ಮಾಡುತ್ತಿದ್ದೀರಿ? ಎಂದ ಅವರು, ಶೀಘ್ರದಲ್ಲಿ ಹಲೋ
ಮಾದಿಗ ಚಲೋ ಬೆಂಗಳೂರು ಎಂಬ ಹೋರಾಟ ರೂಪಿಸುವುದಾಗಿ ಹೇಳಿದರು.
ಮುಖಂಡರಾದ ಕವಣದಾಲ ಶಿವಣ್ಣ, ವೆಂಕಟೇಶ್, ಸೋರೆಕುಂಟೆ ಯೋಗೀಶ್,
ತಿಮ್ಮಾಪುರ ನರಸಿಂಹಮೂರ್ತಿ, ಬಿ.ಜಿ.ಸಾಗರ್ ಮೊದಲಾದವರು ಹಾಜರಿದ್ದರು.

Dalit leaders outrage against the state government regarding the implementation of internal reservation

Share this post

About the author

Leave a Reply

Your email address will not be published. Required fields are marked *