breaking newscovide-19 updatesPUBLIC

Determination action against witchcraft to cure disease: DC Patil.

Determination action against witchcraft to cure disease: DC Patil.

ರೋಗ ಗುಣಮಾಡುವುದಾಗಿ ಮಾಟ-ಮಂತ್ರ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ.

ತುಮಕೂರು: ರೋಗಗಳನ್ನು ಗುಣಪಡಿಸುವುದಾಗಿ ಪೂಜೆ-ಪುನಸ್ಕಾರ, ಮಾಟ- ಮಂತ್ರ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಎಚ್ಚರಿಕೆ ನೀಡಿದರು.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಹೆಚ್ಚಿನ ಸಂಖ್ಯೆಯ ಮಕ್ಕಳಲ್ಲಿ ವೈರಲ್ ಫೀವರ್ ಕಂಡುಬರುತ್ತಿದ್ದು, ಫೀವರ್ ತಗುಲಿದ ಬಹುತೇಕ ಮಕ್ಕಳು ಮರಣ ಹೊಂದುವ ಸಾಧ್ಯತೆಗಳಿವೆ. ಆದ್ದರಿಂದ ಜ್ವರ ಕಂಡು ಬಂದ ಮಕ್ಕಳಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆ ನಿರ್ಲಕ್ಷಿಸಿ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ಗುಣಪಡಿಸಲು ದೇವಸ್ಥಾನಗಳ ಮೊರೆ ಹೋಗುತ್ತಿದ್ದು, ಅಧಿಕಾರಿಗಳು ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ರೋಗ ಗುಣಪಡಿಸಲು ದೇವಸ್ಥಾನಗಳಿಗೆ ಹೋಗದೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು. ಮೌಢ್ಯತೆಯಿಂದ ರೋಗ ಗುಣಪಡಿಸುವ ಪ್ರಸಂಗಗಳು ಕಂಡುಬಂದಲ್ಲಿ ಸಾರ್ವಜನಿಕರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಒದಗಿಸಿ ರೋಗಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಜಿಲ್ಲೆಯಲ್ಲಿ ಹರಡುವ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಲೇರಿಯಾ, ಚಿಕುಂಗುನ್ಯಾ, ಡೆಂಗ್ಯೂ, , ಕ್ಷಯರೋಗ, ಮೆದುಳು ಜ್ವರ ಸೇರಿದಂತೆ ಹಲವು ಮಾರಣಾಂತಿಕ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ರೋಗ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.


ತಗ್ಗಿದ ಮಲೇರಿಯಾ: ಕಳೆದೆರಡ್ಮೂರು ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಪ್ರಸ್ತುತ ಮಲೇರಿಯಾ ಪ್ರಕರಣಗಳ ಪ್ರಮಾಣ ಗಣನೀಯವಾಗಿ ತಗ್ಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ ಜಿಲ್ಲೆಯಲ್ಲಿ 3 ಮಲೇರಿಯಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಉಳಿದಂತೆ, 71 ಡೆಂಗ್ಯೂ, 77 ಚಿಕುನ್‍ಗುನ್ಯಾ ಪ್ರಕರಣಗಳು ವರದಿಯಾಗಿದ್ದು, ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this post

About the author

Leave a Reply

Your email address will not be published. Required fields are marked *