ಬೀದಿಬದಿ ವ್ಯಾಪಾರಿಗಳಿಗೆ ರಕ್ಷಣೆಗೆ ಸುರಕ್ಷಾ ಕಿಟ್ ವಿತರಣೆ
ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕಾರ್ಮಿಕ ಇಲಾಖೆ ಮುಂದಾಗಿದ್ದು ರಾಜ್ಯದ್ಯಂತ ಬೀದಿಬದಿ ವ್ಯಾಪಾರಿಗಳ ರಕ್ಷಣೆಗಾಗಿ ಸುರಕ್ಷಾ ವಿತರಿಸಲಾಗುತ್ತಿದೆ.ಅದರಂತೆ ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಇಲಾಖೆ ವತಿಯಿಂದ ಬೀದಿಬದಿ ವ್ಯಾಪಾರಿಗಳ ರಕ್ಷಣೆಗಾಗಿ ಕೋವಿದ್ ಸುರಕ್ಷತೆಗೆ ಕಿಟ್ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಭದ್ರೆಗೌಡ ಮಾತನಾಡಿ ತುಮಕೂರಿನಲ್ಲಿ ಇದುವರೆಗೂ ನಾನು 420ಕ್ಕೂ ಹೆಚ್ಚು ಕಿಟ್ ವಿತರಿಸಲಾಗಿದ್ದು ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಕಾರ್ಮಿಕ ಇಲಾಖೆ ಮುಂದಾಗಿದ್ದು ಇಲಾಖೆವತಿಯಿಂದ ವಿತರಿಸಲಾಗುತ್ತಿರುವ ಸುರಕ್ಷಾ ಕಿಟ್ ಗೆ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಸಹಕಾರಿಯಾಗಿದ್ದು ಇದಕ್ಕೆ ಸಹಕರಿಸಿದ ಕಟ್ಟಡ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸುರಕ್ಷ ಕಿಟ್ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಸಂಘದ ಸದಸ್ಯರಾದ ಮಂಜುನಾಥ್ ,ಆಟೋ ಶಿವರಾಜು ಸೇರಿದಂತೆ ಹಲವರು ಹಾಜರಿದ್ದರು