News

Drug Free India: ಸಂವಿಧಾನ ದಿನದ ಅಂಗವಾಗಿ ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

Drug Free India: ಸಂವಿಧಾನ ದಿನದ ಅಂಗವಾಗಿ ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

ಸಂವಿಧಾನ ದಿನಾಚರಣೆಯ ಅಂಗವಾಗಿ ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ: ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ತುಮಕೂರಿನಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜನೆ

ತುಮಕೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ಮಾದಕ ವಸ್ತುಗಳ ಬಳಕೆ, ಮೊಬೈಲ್ ವ್ಯಸನ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ತುಮಕೂರು ನಗರದ ದಾನಃ ಪ್ಯಾಲೇಸ್ ಸರ್ಕಲ್‌ನಲ್ಲಿ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ ಹಾಗೂ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.

ಗ್ಲೋಬಲ್ ಶಾಹಿನ್ ಕಾಲೇಜು ಮತ್ತು ಗ್ಲೋಬಲ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಜಾಥಾ ನಗರದ ಹೇಮಾವತಿ ಕಚೇರಿ ಮುಂಭಾಗದಿಂದ ಆರಂಭಗೊಂಡು ಸದಾಶಿವನಗರದ ಮುಖ್ಯ ರಸ್ತೆಯ ಮೂಲಕ ರಿಂಗ್ ರಸ್ತೆಯ ರೈಲ್ವೆ ಸೇತುವೆ ಹಾಗೂ ಮಳೆಕೋಟೆ ರಸ್ತೆಯಲ್ಲಿ ಸಾಗಿತು.

ಬಳಿಕ ರಿಂಗ್ ರಸ್ತೆಯಲ್ಲಿರುವ ನೈಫ್ ಪ್ಯಾಲೇಸ್ ಸಮೀಪದ ಮಾರ್ಗವಾಗಿ ದಾನಃ ಪ್ಯಾಲೇಸ್ ಸರ್ಕಲ್ ತಲುಪಿತು. ನಗರದ ನಾಲ್ಕು ಪ್ರಮುಖ ರಸ್ತೆಗಳು ಸೇರುವ ದಾನಃ ಪ್ಯಾಲೇಸ್ ಸರ್ಕಲ್‌ನಲ್ಲಿ ವಿವಿಧ ಮಾರ್ಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಒಂದೆಡೆ ಸೇರಿ ಮಾದಕ ವಸ್ತುಗಳ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಜಾಥಾದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಯುವಜನತೆಯ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಹಾಗೂ ಮೊಬೈಲ್ ವ್ಯಸನದಿಂದ ದೂರವಿರುವ ಅಗತ್ಯತೆ ಕುರಿತು ಸಂದೇಶಗಳನ್ನು ಸಾರಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಷಣಗಳ ಮೂಲಕ ಆರೋಗ್ಯಕರ ಜೀವನಶೈಲಿ, ಉತ್ತಮ ಚಿಂತನೆ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ಮಹತ್ವವನ್ನು ತಿಳಿಸಿದರು. ಸಂವಿಧಾನ ದಿನದ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರ ಜೊತೆಗೆ, ಮಾದಕ ವಸ್ತುಗಳಿಂದ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ನಿರ್ದೇಶಕ ಡಾ. ಹಜರತ್ ಸಾಹೇಬ್ ನದಾಫ್, ಉಪಪ್ರಾಂಶುಪಾಲ ಗೌಸ್ ಶರೀಫ್, ಜಮೀಯತ್ ಉಲಮಾ-ಎ-ಹಿಂದ್ ಅಧ್ಯಕ್ಷರಾದ ಮೌಲಾನಾ ಸೈಯದ್ ಬಿಲಾಲ್, ಉಪಾಧ್ಯಕ್ಷರಾದ ಮೌಲಾನಾ ಸೈಯದ್ ಖಾಲಿದ್, ಪ್ರಾಂಶುಪಾಲರಾದ ಆಯೇಷಾ ಜುಬೇದ ಕೌಸರ್, ತಸ್ನೀಂ ಫಾತಿಮಾ ಸೇರಿದಂತೆ ಶಾಲಾ-ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share this post

About the author

Leave a Reply

Your email address will not be published. Required fields are marked *