ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ
ಪ್ರೊ. ಎಂ. ವೆಂಕಟೇಶ್ವರಲು ‘ಸುಸ್ಥಿರ ಅಭಿವೃದ್ಧಿಗಾಗಿ ಶಿಕ್ಷಣ
ಶ್ರೇಷ್ಠತಾ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ
ನವದೆಹಲಿಯ ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಎಜುಕೇಟರ್ಸ್
ಫಾರ್ ವರ್ಲ್ಡ್ ಪೀಸ್ ಮತ್ತು ಗ್ಲೋಬಲ್ ಪೀಸ್ ಫೌಂಡೇಶನ್ ಮತ್ತು
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇಕಾಲಜಿ ಅಂಡ್ ಎನ್ವಿರಾನ್‌ಮೆಂಟ್ ಈ
ಪ್ರಶಸ್ತಿಯನ್ನು ನೀಡುತ್ತಿದೆ.
ಡಿ.೨೯ ರಂದು ನವದೆಹಲಿಯಲ್ಲಿ ನಡೆದ ೨೦ನೆಯ ಜಾಗತಿಕ ವಿಶ್ವ ಶಾಂತಿ
ಕಾAಗ್ರೆಸ್‌ನಲ್ಲಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಪ್ರಶಸ್ತಿ
ಸ್ವೀಕರಿಸಿದರು.