ತುಮಕೂರು : ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಘಟಕದ ನೂತನÀ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಡಾ. ರಫೀಕ್ ಅಹ್ಮದ್ ನೇತೃತ್ವದಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸಮಾರಂಭದಲ್ಲಿ ಭಾಗಿಯಾಗಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರುಗಳು ಹೊರಟ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಾ. ಷಫಿ ಅಹ್ಮದ್ ಶುಭ ಕೋರಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಮಹಬೂಬ್ ಪಾಷ, ಮುಖಂಡರಾದ ಶಹಬುದ್ದೀನ್, ಸುಹೇಲ್ ಪಾಷ, ಹಿದಾಯತ್ ಮುಂತಾದವರು ಉಪಸ್ಥಿತರಿದ್ದರು.