ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಊಟ ಹಾಗೂ ವಸತಿಯೊಂದಿಗೆ ಯುಪಿಎಸ್‌ಸಿ (UPSC) ನಾಗರಿಕ ಸೇವಾ ಪರೀಕ್ಷೆ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ -1, 2A, 3A ಹಾಗೂ 3Bಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಆಗಸ್ಟ್ 3ರೊಳಗಾಗಿ ಆನ್‌ಲೈನ್ಮೂ ಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ bcwd.karnataka.gov.in ಅಥವಾ ಸೇವಾ ಸಿಂಧು ಪೋರ್ಟಲ್ sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್, ಅಥವಾ ಸಹಾಯವಾಣಿ 8050770004 ಸಂಪರ್ಕಿಸಬಹುದು ಎಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
