breaking news

ಬೇರೆ ರಾಜಯದಂತೆ ಕರ್ನಾಟಕ ರಾಜ್ಯದಲ್ಲೂ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ: ವಿ ಸೋಮಣ್ಣ

ಬೇರೆ ರಾಜಯದಂತೆ ಕರ್ನಾಟಕ ರಾಜ್ಯದಲ್ಲೂ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ: ವಿ ಸೋಮಣ್ಣ

ತುಮಕೂರು, ಡಿ. ೨೩- ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ ೪೫೦೦ ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ಯೋ ಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್
ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ ೪೦ ಕಿ.ಮೀ.ನಲ್ಲಿ ಹಾದು ಹೋಗಲಿದೆ. ೫೦೦ ಕೋಟಿ ರೂ.
ವೆಚ್ಚದಲ್ಲಿ ಪುಣೆ-ಬೆಂಗಳೂರು ೫೦೦ ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು.


ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ
ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು. ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್‌ಗೆ ಬೇರೆ ಬೇರೆ ಪಂಚಾಯ್ತಿಗಳಿಗೆ ಹೋಗುತ್ತೇನೆ. ಆ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣವನ್ನು ಹೇಗೆ ವಿನಿಯೋಗಿಸಲಾಗಿದೆ ಎಂಬುದನ್ನು ಸಹ ಪರಿಶೀಲನೆ ನಡೆಸುತ್ತೇನೆ ಎಂದರು.


ರಾಜ್ಯದಲ್ಲಿ ಒಟ್ಟು ೫೦೭೨ ಕೋಟಿ ರೂ. ರೈಲ್ವೆ ಯೋಜನೆಗೆ ಅನುದಾನ ತಂದಿದ್ದೇನೆ. ಈಗಾಗಲೇ ೧೭ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಅಲ್ಲಿ ಆಗಬೇಕಾಗಿರುವ ರೈಲ್ವೆ ಯೋಜನೆಗಳ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದರು. ತುಮಕೂರು-ರಾಮದುರ್ಗ ಮಾರ್ಗದಲ್ಲಿ ೨೫೦೦ ಕೋಟಿ ವೆಚ್ಚದಲ್ಲಿ ೨ನೇ ಹಂತದ ಕೆಲಸಗಳು ಆರಂಭವಾಗಿವೆ. ಶೇ. ೯೦ ರಷ್ಟು ಭೂ ಹಸ್ತಾಂತರ ಕಾರ್ಯ ಮುಗಿದಿದೆ. ೨೦೨೭ರ ಡಿಸೆಂಬರ್‌ಗೆ ಈ ಯೋಜನೆ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Green field corridor project in Karnataka state like other states: Union Minister V Somanna

Share this post

About the author

Leave a Reply

Your email address will not be published. Required fields are marked *