breaking newsPolitics PublicPUBLICSOCIAL ACTIVIST

Insisting on relocation of hostel building.

Insisting on relocation of hostel building.

ಹಾಸ್ಟೆಲ್ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ.

ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿನಿಲಯದ ಕಟ್ಟಡವನ್ನು ಪಟ್ಟಣದ ಸಮೀಪ ನಿರ್ಮಾಣ ಮಾಡಬೇಕು ಎಂದು ಪಾವಗಡ ತಾಲೂಕು ವಿದ್ಯಾರ್ಥಿ ಯುವಜನ ಹಿತರಕ್ಷಣಾ ಸಮಿತಿ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನು ಪಾವಗಡ ತಾಲೂಕು ಬಹಳ ಹಿಂದುಳಿದ ಪ್ರದೇಶವಾಗಿದ್ದು ಈ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ವಿದ್ಯಾರ್ಥಿನಿಲಯ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲೇ ಇಷ್ಟು ವರ್ಷ ವಿದ್ಯಾರ್ಥಿನಿಲಯಗಳನ್ನು ನಡೆಸಲಾಗುತ್ತಿತ್ತು .

ಆದರೆ ಇಂದು ಸರ್ಕಾರದಿಂದ 24 ಕೋಟಿಗೂ ಹೆಚ್ಚು ಹಣ ಮಂಜೂರು ಮಾಡಿರುವುದು ಸಂತಸದ ವಿಷಯ ಆದರೆ ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ನೂತನವಾಗಿ ನಿರ್ಮಾಣ ಮಾಡುತ್ತಿರುವ ಹಾಸ್ಟೆಲ್ ಕಟ್ಟಡವನ್ನು ಪಾವಗಡದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿ ನೂತನ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡಲು ಮುಂದಾಗಿರುವುದು ವಿದ್ಯಾರ್ಥಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ ಪಟ್ಟಣದ ಹೊರವಲಯದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ ವಾದರೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ತರಗತಿಗೆ ಹಾಗೂ ಹಾಸ್ಟೆಲ್ಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ

ಪ್ರತಿನಿತ್ಯ ವಿದ್ಯಾರ್ಥಿಗಳು ಸುಮಾರು ಇಪ್ಪತ್ತು ಕಿಲೋಮೀಟರ್ ದೂರದ ಹಾಸ್ಟೆಲ್ಗಳಿಗೆ ತೆರಳುವ ಸ್ಥಿತಿ ನಿರ್ಮಾಣವಾಗುತ್ತದೆ ಕೂಡಲೇ ಇದನ್ನು ಅರಿತು ಸಂಬಂಧಪಟ್ಟ ಅಧಿಕಾರಿಗಳು ಪಾವಗಡ ಪಟ್ಟಣದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಬೇಕು ಇಲ್ಲವಾದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದಂತಾಗುತ್ತೆ ಆದಕಾರಣ ಕೂಡಲೇ ಸರ್ಕಾರ, ಜಿಲ್ಲಾಡಳಿತವು ಇದಕ್ಕೆ ಆಸ್ಪದ ನೀಡಬಾರದು ಕಾಲೇಜಿಗೆ ಹತ್ತಿರವಿರುವ ಸ್ಥಳದಲ್ಲೇ ವಿದ್ಯಾರ್ಥಿನಿಲಯ ಸಮುಚ್ಚಯ ಕಟ್ಟಡವನ್ನು ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಇಲ್ಲವಾದರೆ ಮುಂದಿನ ದಿನದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿμÁ್ಟವಧಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.


ಇನ್ನೂ ಪ್ರತಿಭಟನೆಯಲ್ಲಿ ಪಾವಡ ತಾಲೂಕು ವಿದ್ಯಾರ್ಥಿ ಯುವಜನ ಹಿತರಕ್ಷಣಾ ಸಮಿತಿಯ ಸದಸ್ಯರಾದ ಕುಣ ಹಳ್ಳಿ ಅರ್ .ಮಂಜುನಾಥ್, ಜಾಲೋಡು ಹೊನ್ನೂರಪ್ಪ, ಭಾನುಪ್ರಕಾಶ್, ರಮೇಶ್, ರಾಮಾಂಜಿ ವಿರುಪಸಂದ್ರ, ಶನಿವಾರಪ್ಪ, ಸೋಮೇಶ್ವರ, ಗೋಪಾಲಕೃಷ್ಣ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಹಾಜರಿದ್ದರು

Share this post

About the author

Leave a Reply

Your email address will not be published. Required fields are marked *