ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ಬೆಳಿಗ್ಗೆ 10 ಗಂಟೆಯಿಂದ ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Job Fair at Tumkur University on 9th January
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ
ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ತುಮಕೂರು
ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ ೯ರಂದು ಬೆಳಿಗ್ಗೆ ೧೦
ಗಂಟೆಯಿAದ ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಉದ್ಯೋಗ ಮೇಳ’
ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ಕೆ.ಕೆಂಪಯ್ಯ ತಿಳಿಸಿದ್ದಾರೆ.
ಈ ಮೇಳದಲ್ಲಿ ಬೆಂಗಳೂರು ಹಾಗೂ ತುಮಕೂರಿನ ಪ್ರತಿಷ್ಠಿತ ೭೫ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಎಸ್.ಎಸ್.ಎಲ್.ಸಿ./ಪಿಯುಸಿ/ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ/ ಐಟಿಐ/ಬಿ.ಇ. ಪದವಿ ಪೂರ್ಣಗೊಳಿಸಿರುವ
ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9449471966, 9742980941, 9448989874, 8123503008ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಉದ್ಯೋಗ ಮೇಳ ಉದ್ಘಾಟನೆ : ಉದ್ಯೋಗ ಮೇಳವನ್ನು ಜನವರಿ ೯ರ ಬೆಳಿಗ್ಗೆ ೧೦ ಗಂಟೆಗೆ
ಉದ್ಘಾಟಿಸಲಾಗುವುದು. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.