ತುಮಕೂರು: ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುಷ್ಕರ್ಮಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಬಂಜಾರ (ಲಂಬಾಣ ) ಜಾಗೃತಿ ದಳದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬಂಜಾರ (ಲಂಬಾಣ ) ಜಾಗೃತಿ ದಳದ ಸಂಸ್ಥಾಪಕ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ (ತಿಪ್ಪಸರ್ ನಾಯ್ಕ್), ವಿಜಯಪುರ ನಗರದ ವಿಶ್ವೇಶ್ವರ ನಗರದಲ್ಲಿ, ವಿಜಯಪುರದ ಗಾಂಧಿಚೌಕ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ಬಂಜಾರ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಕರ್ಮಿ ಸಂಜೀವ ಹುಲ್ಲೂರನನ್ನು ತಕ್ಷಣ ಬಂಧಿಸಿ ಪೋಸ್ಕೋ ಹಾಗೂ ಎಸ್ಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಅಪರಾಧವೆಸಗಿದ್ದರಿಂದ ಸದರಿ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕೆಂದು ಒತ್ತಾಯಿಸಿದರು.
ಸದರಿ ಪ್ರಕರಣವನ್ನು ಒಂದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು, ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣ ಸಿ 50 ಲಕ್ಷ ರೂ. ಪರಿಹಾರ ಹಾಗೂ ಆ ಕುಟುಂಬಕ್ಕೆ ಸರ್ಕಾರಿ ನೌಕರಿಯನ್ನು ಒದಗಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನಾರಾಯಣನಾಯ್ಕ, ಸೇವಂತ್ ವಾಸುದೇವ್, ಜಯರಾಮನಾಯ್ಕ, ಗೀತಾ ಕುಬೇರನಾಯ್ಕ್ ಸೇರಿದಂತೆ ಹಲವರಿದ್ದರು.