ತುಮಕೂರು : ಕುಣಿಗಲ್ ತಾಲೂಕಿನ ಅಮೃತೂರು ಕರ್ನಾಟಕ ಪಬ್ಲಿಕ್ ಶಾಲೆ ಕಾಲೇಜುಗಳ ಮಕ್ಕಳಿಂದ ಸೋಮವಾರ ಸಂಕ್ರಾಂತಿ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರಭಾಕರ್ ರೆಡ್ಡಿ ಇಂದಿನ ದಿನಮಾನಸಗಳಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದು ಮಾತ್ರವಲ್ಲದೆ, ಜೀವನ ನಿರ್ವಹಣೆಗೆ ವ್ಯಾವಹಾರಿಕ ಜಗತ್ತಿನಲ್ಲಿ ಬದುಕಲು ವ್ಯವಹಾರ ಜ್ಞಾನ ಮತ್ತು ಜೀವನ ಜವಾಬ್ದಾರಿಯನ್ನು ಅರಿಯಬೇಕಿದೆ ಎಂದು ತಿಳಿಸಿದರು. ಶಾಲಾ ಮಕ್ಕಳಲ್ಲಿ ಸಂವಹನ ಕೌಶಲ ಹಾಗೂ ವ್ಯವಹಾರ ಜ್ಞಾನದ ಅರಿವು ಮೂಡಿಸಲು ಈ ಸಂಕ್ರಾಂತಿ ಸಂತೆಯು ಯಶಸ್ವಿಯಾಗಿದೆ ಎಂದು ತಿಳಿಸಿದರು.

ಉಪ ಪ್ರಾಂಶುಪಾಲರಾದ ಶ್ರೀಮತಿ ವಿಜಯಲಕ್ಷ್ಮಿ ಎ ಎಂ ರವರು ಮಾತನಾಡಿ ನಮ್ಮ ಶಾಲೆಯ ಆವರಣದಲ್ಲಿ ನಡೆಯುತ್ತಿರುವ ಸಂಕ್ರಾಂತಿ ಸಂತೆ ಇತರ ಶಾಲೆಗಳಿಗೆ ಮಾದರಿಯಾಗಲಿದೆ ಎಂದು ತಿಳಿಸಿದರು.
ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ವಿಜಯಲಕ್ಷ್ಮಿ ಎ ಸಿ ರವರು ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಉಪಸ್ಥಿತರಿದ್ದರು. ಮಕ್ಕಳ ಸಂಕ್ರಾಂತಿ ಸಂತೆಗೆ ನೂರಾರು ಗ್ರಾಮಸ್ಥರು ಆಗಮಿಸಿ ಸಂತಸ ವ್ಯಕ್ತಪಡಿಸಿದರು.
Karnataka Public School children celebrate 'Sankranti Santhe'