ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಹುಟ್ಟುಹಬ್ಬ ಆಚರಣೆ.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ರವರ 49ನೇ ಹುಟ್ಟುಹಬ್ಬವನ್ನು ತುಮಕೂರಿನ ಕರವೇ ತುಮಕೂರು ಘಟಕದ ವತಿಯಿಂದ ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಗಳನ್ನು ವಿತರಿಸುವ ಮೂಲಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ಜಿಲ್ಲಾಧ್ಯಕ್ಷ ಡಮುರುಗೇಶ್ ಮಾತನಾಡಿ ಬೆಳಗಾವಿಯ ಇತಿಹಾಸದಲ್ಲಿ ಬೆಳಗಾವಿಯ ಮಹಾನಗರ ಪಾಲಿಕೆ ಆವರಣದಲ್ಲಿ ಮೊಟ್ಟಮೊದಲ ಬಾರಿಗೆ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಕನ್ನಡಿಗರ ಶಕ್ತಿಯನ್ನು ಪ್ರದರ್ಶಿಸಿದ ಪ್ರವೀಣ್ ಶೆಟ್ಟಿ ರವರ ಹುಟ್ಟುಹಬ್ಬವನ್ನು ತುಮಕೂರು ಜಿಲ್ಲಾ ಘಟಕದ ವತಿಯಿಂದ ಸರಳವಾಗಿ ಆಚರಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಕಾರ್ಯಾಧ್ಯಕ್ಷರಾದ ದೀಪಕ್ ಬೋಪಣ್ಣ, ವಕ್ತಾರರಾದ ಹೇಮಂತ್ ಬ್ಯಾಡನೂರು, ನವೀನ್ ಸತೀಶ್ ,ಧನುμï ,ಜಗದೀಶ್ ಲೋಕೇಶ, ಸೇರಿದಂತೆ ಇತರರು ಹಾಜರಿದ್ದರು.