breaking news

Karnataka | Tumkur RTO Seized two Private Buses | Violation of Covid-19 Rules

Karnataka | Tumkur RTO Seized two Private Buses | Violation of Covid-19 Rules

ಅನಧಿಕೃತವಾಗಿ ಸಂಚರಿಸುತ್ತಿದ್ದ ಹೊರ ರಾಜ್ಯದ ಬಸ್ ವಶ: ಪ್ರಕರಣ ದಾಖಲು

ತುಮಕೂರು ನಗರದ ಹೊರವಲಯದ ಕ್ಯಾತ್ಸಂದ್ರ ಟೋಲ್ ಬಳಿ ಯಾವುದೇ ಅನುಮತಿಯಿಲ್ಲದೆ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದ್ದ ಖಾಸಗಿ ಬಸ್’ಗಳನ್ನು ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಕೋವಿಡ್ ನಿಯಮಗಳ ಟಫ್ ರೂಲ್ಸ್ ಜಾರಿಯಲ್ಲಿದ್ದು ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ

ಇಂತಹ ಸಮಯದಲ್ಲಿ ಸರ್ಕಾರದಿಂದಾಗಲಿ ಅಥವ ಸಾರಿಗೆ ಇಲಾಖೆಯಿಂದಾಗಲಿ ಯಾವುದೇ ಪೂರ್ವಾನುಮತಿಯಿಲ್ಲದೆ ಹೊರ ರಾಜ್ಯಕ್ಕೆ ಸೇರಿದ ಎರಡು ಬಸ್ ಗಳು ಪ್ರಯಾಣಿಕರನ್ನು ತುಂಬಿಕೊಂಡು ರಾಜಸ್ಥಾನಕ್ಕೆ ತೆರಳುತ್ತಿದ್ದವು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ಯಾತ್ಸಂದ್ರ ಟೋಲ್ ಬಳಿ ಸಾರಿಗೆ ನಿರೀಕ್ಷಕರು ಬಸ್’ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Share this post

About the author

Leave a Reply

Your email address will not be published. Required fields are marked *