Karnataka Union of Working Journalists
Tumkur District Unit appeals to DC Patil
ನಕಲಿ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಕೆ.ಯು.ಡಬ್ಲ್ಯೂ.ಜೆ ಮನವಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರಿಗೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಹೆಸರಿನಲ್ಲಿ ಕೆಲವು ನಕಲಿ ಪತ್ರಕರ್ತರು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರಿನ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಮತ್ತು ಪತ್ರಕರ್ತರ ಹೆಸರಿನಲ್ಲಿ ಆರ್.ಟಿ.ಐ. ಅಡಿಯಲ್ಲಿ ಸರ್ಕಾರಿ ದಾಖಲೆಗಳನ್ನು
ಪಡೆದು ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ, ಉದ್ದಿಮೆದಾರರಿಗೆ ಪತ್ರಿಕೆಯ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದು ಮತ್ತು ಕೆಲವರು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಪ್ರೆಸ್ ಎಂದು ಬೋರ್ಡ್ ಹಾಕಿಕೊಂಡು ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ನಕಲಿ ಪತ್ರಕರ್ತರು, ನಕಲಿ ಯುಟ್ಯೂಬ್ ಚಾನೆಲ್ ಹಾಗೂ ಈ ರೀತಿಯ ಪ್ರವೃತ್ತಿಯುಳ್ಳ ಪತ್ರಕರ್ತರಿಗೆ ಕಡಿವಾಣ ಹಾಕಬೇಕೆಂದು ಕೆ.ಯು.ಡಬ್ಲ್ಯೂ.ಜೆ ದೂರು ನೀಡಿದ್ದಾರೆ.
ದೂರಿನನ್ವಯ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು ಇಲಾಖೆಯು ನೈಜ ಪತ್ರಕರ್ತರಿಗೆ ದಿನದ 24 ಗಂಟೆಯೂ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಸಿದ್ಧವಿರುತ್ತದೆ ಎಂದು ಹೇಳಿದರು.