ಕಲ್ಪತರು ನಗರಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ 39ನೇ ಸಮ್ಮೇಳನವನ್ನು ಯಶಸ್ವಿಯಾದ ಹಿನ್ನೆಲೆಯಲ್ಲಿ ಹಲವು ಸಮಿತಿಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದ ತುಮಕೂರಿನ ಪತ್ರಕರ್ತರಾದ ಸೈಯದ್ ಯೂಸುಫ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಚಿ.ನಿ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿಗಳಾದ ರಘುರಾಮ್, ರಾಷ್ಟ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಡಿ.ಎಂ ಸತೀಶ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಶಾಂತರಾಜು, ಟಿ.ಎನ್ ಮಧುಕರ್ ಸೇರಿದಂತೆ ಮತ್ತಿತರರು ಹಾಜರಿದ್ದರು.