breaking news

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆಅನ್ಯಾಯವಾಗದಂತೆ ಕ್ರಮವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆಅನ್ಯಾಯವಾಗದಂತೆ ಕ್ರಮವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ತುಮಕೂರು: ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ
ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ
ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಸಚಿವ ಲಕ್ಷ್ಮೀ ಆರ್. ಹೆಬ್ಬಾಳಕರ್ ಸೂಚಿಸಿದರು.


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ
ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ
ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ
ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ
ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗೃಹಲಕ್ಷ್ಮಿ ಯೋಜನೆಯ
ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು,
ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು
ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾಹಿತಿ
ಪಡೆದರು.


ಗೃಹಲಕ್ಷ್ಮಿಯರಿಗೆ ೨೮೨೬೮ ಕೋಟಿ ರೂ. :
ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಮನೆ
ಯಜಮಾನಿ ಖಾತೆಗೆ ೨೮೨೬೮ ಕೋಟಿ ರೂ.ಗಳನ್ನು ನೇರ ನಗದು
ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ
ಮಹಿಳೆಯರಿಂದ ಮೆಚ್ಚುಗೆ ಮಾತುಗಳು ವ್ಯಕ್ತವಾಗಿವೆ ಎಂದು
ತಿಳಿಸಿದರು.


ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ :
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ಯೋಗಸ್ಥ
ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸುವುದು ಸೂಕ್ತವೆಂದು
ತಿಳಿಸಿದರಲ್ಲದೆ, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಕ್ಕಾಗಿ ೫೦
ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು. ಈ ಕುರಿತು
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ
ಸೂಚಿಸಿದರು.


ರೀಲ್ಸ್ಗೆ ಪ್ರೋತ್ಸಾಹಿಸಿ :
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ
ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ
ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ
ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ
ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
೨೩೪ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ:
ಜಿಲ್ಲೆಯ ೨೩೪ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ
ಸೌಕರ್ಯವುಳ್ಳ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ಕ್ರಮ
ಕೈಗೊಳ್ಳಬೇಕು. ಇದರಿಂದ ಪೋಷಕರು ತಮ್ಮ ಮಕ್ಕಳ
ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳಿಗೆ ನೀಡುವ ಹೆಚ್ಚಿನ ಶುಲ್ಕದ
ಹೊರೆಯನ್ನು ತಪ್ಪಿಸಿದಂತಾಗುತ್ತದೆ. ಅಂಗನವಾಡಿ
ಕಟ್ಟಡಗಳನ್ನು ನಿರ್ಮಿಸಲು ನಗರದಲ್ಲಿ ನಿವೇಶನಗಳನ್ನು
ಗುರುತಿಸಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸಚಿವರು
ಸೂಚನೆ ನೀಡಿದರು.


ಸಹಾಯವಾಣಿ ಕೇಂದ್ರಕ್ಕೆ ಸಚಿವರ ಕರೆ :
ಸಭೆಯ ಮಧ್ಯೆ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ
ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ದೂರವಾಣಿ ಕರೆ ಮಾಡಿ
ಅಪರಿಚಿತರಂತೆ ಮಾತನಾಡಿ “ನಾನು ಶಿರಾದಿಂದ ಮಾತನಾಡುತ್ತಿದ್ದು,
ನಮ್ಮತ್ತೆ ನನಗೆ ಹೊಡೆಯುತ್ತಿದ್ದಾರೆ” ಎಂದು ದೂರು ನೀಡುವ
ನೆಪದಲ್ಲಿ ಸಹಾಯವಾಣಿ ಸಂಖ್ಯೆ ಸಕ್ರಿಯವಾಗಿರುವ ಬಗ್ಗೆ
ಖಚಿತಪಡಿಸಿಕೊಂಡರಲ್ಲದೆ, ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳ
ಕರ್ತವ್ಯ ಪಾಲನೆ ಹಾಗೂ ಸಹಾಯವಾಣಿ ಕಾರ್ಯನಿರ್ವಹಣೆ ಬಗ್ಗೆ
ಮೆಚ್ಚುಗೆ ವ್ಯಕ್ತಪಡಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ
ಚೇತನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಇಲಾಖೆಯಡಿ
ನಡೆಯುತ್ತಿರುವ ಅಂಗವನಾಡಿ ಕೇಂದ್ರ, ಸಾಂತ್ವನ ಕೇಂದ್ರ, ಶಿಶು
ಪಾಲನಾ ಕೇಂದ್ರ, ಸ್ವೀಕಾರ ಕೇಂದ್ರ, ಬಾಲಮಂದಿರ, ವೃದ್ಧಾಶ್ರಮದ
ಪ್ರಗತಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು ೪೧೯೯ ಅಂಗನವಾಡಿ
ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರದಲ್ಲಿ
೬ ತಿಂಗಳಿನಿಂದ ೬ ವರ್ಷದೊಳಗಿನ ಮಕ್ಕಳು/
ಗರ್ಭಿಣಿ/ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ.
ಜಿಲ್ಲೆಯಲ್ಲಿ ೫ ವರ್ಷದೊಳಗಿನ ತೀವ್ರ ಅಪೌಷ್ಟಿಕತೆಯ ೩೫೩
ಮಕ್ಕಳಿದ್ದು, ಈ ಪೈಕಿ ೬೯ ಮಕ್ಕಳನ್ನು ವೈದ್ಯರ ಶಿಫಾರಸ್ಸಿನ
ಮೇರೆಗೆ ಎನ್‌ಆರ್‌ಸಿ/ಎಂಎನ್‌ಆರ್‌ಸಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಬಾಲ್ಯ
ವಿವಾಹಕ್ಕೆ ಸಂಬಂಧಿಸಿದಂತೆ ೪೮ ದೂರು ಪ್ರಕರಣಗಳು
ಸ್ವೀಕೃತವಾಗಿದ್ದು, ೪೬ ಪ್ರಕರಣಗಳಲ್ಲಿ ಬಾಲ್ಯವಿವಾಹವನ್ನು
ತಡೆಯಲಾಗಿದೆ. ಉಳಿದ ೨ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್
ದಾಖಲಿಸಲಾಗಿದೆ ಎಂದು ತಿಳಿಸಿದರು.


ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಸನ್ಮಾನ :
ಸಭೆ ಬಳಿಕ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್
ಹಾಗೂ ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಶಿರಾ ಶಾಸಕ ಹಾಗೂ ಕರ್ನಾಟಕ ಸರ್ಕಾರದ ದೆಹಲಿ
ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್
ಹಾಗೂ ನಿರ್ದೇಶಕ ಸಿದ್ದೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್
ಹೆಚ್ಚುವರಿ ವರಿಷ್ಠಾಧಿಕಾರಿ ಮರಿಯಪ್ಪ, ವಿಕಲ ಚೇತನರ ಹಾಗೂ ಹಿರಿಯ

ಸಬಲೀಕರಣ ಇಲಾಖೆ ನಿರ್ದೇಶಕ ರಾಘವೇಂದ್ರ, ಸಚಿವರ ವಿಶೇಷ
ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕ ಪುಷ್ಪಾ ರಾಯ್ಕರ್,
ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಮಹಿಳಾ ಅಭಿವೃದ್ಧಿ ಅಧಿಕಾರಿ
ಪವಿತ್ರ, ಸೇರಿದಂತೆ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ
ಅಧಿಕಾರಿಗಳು ಉಪಸ್ಥಿತರಿದ್ದರು. ‎

Share this post

About the author

Leave a Reply

Your email address will not be published. Required fields are marked *