Municipal commissioner warned to those who encroached on the footpath
ತುಮಕೂರು ನಗರದಲ್ಲಿ ಸಂಚರಿಸುವ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಮಹಾನಗರ ಪಾಲಿಕೆಯ ಆಯುಕ್ತರು ತುಮಕೂರು ನಗರದ ಹೃದಯ ಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಖ್ಯ ರಸ್ತೆಯ ಬದಿಯಲ್ಲಿ ಪಾದಾಚಾರಿಗಳು ಸಂಚರಿಸುವ ಜಾಗವನ್ನು ಒತ್ತುವರಿ
ಮಾಡಿಕೊಂಡಿರುವ ಅಂಗಡಿಗಳ ಮಾಲೀಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಸೂಚನೆ ನೀಡಿ ಕೆಲವು ಫುಟ್ಪಾತ್ ನಲ್ಲಿ ಒತ್ತುವರಿ ಮಾಡಿದ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಇನ್ನು ಕೆಲವರಿಗೆ ಎಚ್ಚರಿಕೆ ನೀಡಿ ಮುಂದಿನ ದಿನಗಳಲ್ಲಿ ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಪಾಲಿಕೆ ಆಯುಕ್ತರದ ಅಶ್ವಿಜ ರವರು ಅದೇಶಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಇಂಜಿನಿಯರ್, ಆರೋಗ್ಯ ನಿರೀಕ್ಷಕರು, ಹಾಗೂ ಪಾಲಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.