breaking news

Road Accident: ಖಾಸಗಿ ಬಸ್‌ ಓಮಿನಿ ಕಾರು ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

Road Accident: ಖಾಸಗಿ ಬಸ್‌ ಓಮಿನಿ ಕಾರು ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು
Private Bus and Omni Car accident on the road; Both Died on the spot

ತುಮಕೂರಿನ ಮರಳೂರು ಕೆರೆ ಬಳಿ ಕುಣಿಗಲ್ ರಸ್ತೆಯಲ್ಲಿ ನಡೆದ ಘಟನೆ

ತುಮಕೂರಿನ ಮರಳೂರು ಕೆರೆ ಏರಿ ಬಳಿ ಅಪಘಾತ ಸಂಭವಿಸಿದ್ದು, ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ.ತುಮಕೂರು ನಗರದ ಮರಳೂರು ಕೆರೆ ಏರಿ ಬಳಿ ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ತುಮಕೂರು ತಾಲೂಕಿನ ಮಾನಂಗಿ ಗ್ರಾಮದ ನಿವಾಸಿ ಸುರೇಶ್ ಹಾಗೂ ಸುಮಾ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ತುಮಕೂರಿನಿಂದ ಮಾನಂಗಿ ಕಡೆಗೆ ಇವರು ಹೊರಟಿದ್ದರು ಎಂದು ತಿಳಿದುಬಂದಿದೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ದರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.ಸದ್ಯ ಖಾಸಗಿ ಬಸ್ ಚಾಲಕನನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಅಪಘಾತದಿಂದ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

Advertisements

Share this post

About the author

Leave a Reply

Your email address will not be published. Required fields are marked *