Politics PublicPUBLIC

Program for Educational Resources Localization at Zilla Panchayat

Program for Educational Resources Localization at Zilla Panchayat

ಜಿಲ್ಲಾ ಪಂಚಾಯತ್‌ನಲ್ಲಿ ಶೈಕ್ಷಣಿಕ ಸಂಪನ್ಮೂಲಗಳ ಸ್ಥಳೀಕರಣ ಕಾರ್ಯಕ್ರಮ

ಶೈಕ್ಷಣ ಕ ಪ್ರಗತಿಗೆ ಪೂರಕವಾದ ನೂತನ ಅನ್ವೇಷಣೆಗಳು ಹೆಚ್ಚಾಗಬೇಕು; ಬಿ.ಸಿ. ನಾಗೇಶ್
ತುಮಕೂರು: ಶೈಕ್ಷಣ ಕ ಪ್ರಗತಿಗೆ ಪೂರಕವಾದ ಹೊಸ ಅನ್ವೇಷಣೆಗಳು ಹೆಚ್ಚಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮತ್ತು ತರಬೇತಿ ಸಂಸ್ಥೆ, ಕೇರಿಂಗ್ ವಿತ್ ಕಲರ್, ಇಂಡಿಯಾ ಲಿಟರಸಿ ಪ್ರಾಜೆಕ್ಟ್, ಮಂತ್ರ ಫಾರ್ ಚೇಂಜ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಶೈಕ್ಷಣ ಕ ಸಂಪನ್ಮೂಲಗಳ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳಲ್ಲಿ ವಿಶೇಷ ದೃಷ್ಟಿಕೋನದಲ್ಲಿ ಜಿಲ್ಲೆಯನ್ನು ಶೈಕ್ಷಣ ಕವಾಗಿ ಅಭಿವೃದ್ಧಿ ಪಡಿಸಲು ಮೂರು ಶೈಕ್ಷಣ ಕ ಸಂಸ್ಥೆಗಳ ನೆರವಿನೊಂದಿಗೆ ಶೈಕ್ಷಣ ಕ ಸಂವರ್ಧನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.


ಬಹುತೇಕ ಸರ್ಕಾರಿ ಶಾಲೆಗಳು ಅದರಲ್ಲೂ ಶತಮಾನದ ಶಾಲೆಗಳು ಹಳೆ ವಿದ್ಯಾರ್ಥಿಗಳ ನೆರವಿನಿಂದಲೇ ಅಭಿವೃದ್ಧಿಗೊಂಡಿವೆ. ಅಭಿವೃದ್ಧಿಗೊಂಡಿರುವ ಕಟ್ಟಡಗಳು ಹಳೆ ವಿದ್ಯಾರ್ಥಿಗಳ ಉತ್ಸಾಹವನ್ನು ಸಾರಿ ಹೇಳುತ್ತವೆ. ಅಷ್ಟು ಸುಂದರವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ. ಈ ತರಹದ ಅಭಿವೃದ್ಧಿ ಸಾಧನೆಗಳ ಕೆಲಸಗಳು ಸಾಕಷ್ಟು ನಡೆಯುತ್ತಿದ್ದು, ಇಂತಹ ಕೆಲಸಗಳಿಗೆ ಪೆÇ್ರೀತ್ಸಾಹ ನೀಡುವ ಕೆಲಸವಾಗಬೇಕು ಎಂದು ಶಾಲೆಗಳಿಗೆ ಭೇಟಿ ನೀಡಿದ್ದ ಅನುಭವಗಳನ್ನು ಹಂಚಿಕೊಂಡರು.
ಶೈಕ್ಷಣ ಕವಾಗಿ ಭಾರತ ವಿಶೇಷ ಸಾಧನೆ ಮಾಡಿದ್ದರೂ, ಮೂಲಭೂತ ಶಿಕ್ಷಣ ವ್ಯವಸ್ಥೆಯಲ್ಲಿ ಆಸೆಗಳು ಈಡೇರದೇ ಉನ್ನತ ಅಧಿಕಾರಿಗಳು, ವೈದ್ಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯಬೇಕೆಂಬ ನಿಟ್ಟಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಮಾನವೀಯ ಮೌಲ್ಯಗಳನ್ನು ಹೆಚ್ಚಿಸಲು ಈ ನೂತನ ಶಿಕ್ಷಣ ನೀತಿ ಸಹಕಾರಿಯಾಗಲಿದೆ ಎಂದರು.


ಭಾರತದ ವಿಶೇಷ ಗುಣ ಮತ್ತೊಮ್ಮೆ ಆಚೆ ಬರುತ್ತಿದೆ. ಪುರಾತನ ಕಾಲದಲ್ಲಿ ಎಲ್ಲಾ ಗುರುಕುಲಗಳು ಸ್ವಾವಲಂಬನೆಯಾಗಿ ನಡೆಯುತ್ತಿದ್ದವು. ಬ್ರಿಟೀಷರು ಗುರುಕುಲಗಳನ್ನು ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಗುರುಕುಲಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸಬಾರದು ಎಂದು ಆದೇಶ ಹೊರಡಿಸಿದರು. ಬ್ರಿಟೀಷರ ಆದೇಶದ ಬಳಿಕವೂ ಗ್ರಾಮಗಳ ಹಾಗೂ ಸ್ಥಳೀಯ ಸಂಪನ್ಮೂಲಗಳ ನೆರವಿನಿಂದ ಗುರುಕುಲಗಳು ನಡೆಯುತ್ತಿದ್ದವು. ಇದನ್ನು ಗಮನಿಸಿದ ಬ್ರಿಟೀಷ್ ಆಡಳಿತ ಗುರುಕುಲಗಳನ್ನು ನಿಲ್ಲಿಸಿದರು ಎಂದರು.
ಸಾಮಾನ್ಯ ಶಾಲೆಗಳಲ್ಲಿ ಓದಿದ ಅಬ್ದುಲ್‍ಕಲಾಂ, ಡಾ.ಬಿ.ಆರ್. ಅಂಬೇಡ್ಕರ್, ಸರ್ ಎಂ. ವಿಶ್ವೇಶ್ವರಯ್ಯರಂತಹವರು ಮಹಾನ್ ಸಾಧಕರಾಗಿದ್ದಾರೆ. ಅಂತೆಯೇ ದೇಶದಲ್ಲಿ ಅಭ್ಯಾಸ ಮಾಡಿದ ಶೇ.50ರಷ್ಟು ವಿಜ್ಞಾನಿಗಳು, ವೈದ್ಯರು ಜಗತ್ತಿನ ವಿವಿಧ ದೇಶಗಳ ಉನ್ನತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದು ಭಾರತ ದೇಶ ವಿಶ್ವಕ್ಕೆ ನೀಡಿದ ಕೊಡುಗೆಯಾಗಿದೆ ಎಂದು ಹೇಳಿದರು.


ಜಿಲ್ಲೆಯ ಸಿಆರ್‍ಸಿ ಕೇಂದ್ರಗಳ ಬಲವರ್ಧನೆ ಸಂಶೋಧನಾ ಕೈಪಿಡಿಯನ್ನು ಬಿಡುಗಡೆಗೊಳಿಸಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಗೌಡ ಮಾತನಾಡಿ ಒಂದೇ ಸೂರಿನಡಿ ಗುಣಾತ್ಮಕ, ಮೌಲ್ಯಾಧಾರಿತ, ಕೌಶಲ್ಯಯುತ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಈ ಹೊಸ ಶಿಕ್ಷಣ ನೀತಿಯನ್ನು ಎಲ್ಲರೂ ಹೃದಯತುಂಬಿ ಸ್ವಾಗತಿಸಿ, ನೂತನ ಶಿಕ್ಷಣ ನೀತಿಯ ಸಮಗ್ರ ಅನುಷ್ಟಾನಕ್ಕೆ ಕೈಜೋಡಿಸೋಣ ಎಂದರು.


ಉತ್ತಮ ಶಿಕ್ಷಣ ಅಳವಡಿಸಿಕೊಂಡ ನಾಡು ಅಭಿವೃದ್ಧಿಯಲ್ಲಿಯೂ ಮುಂದಿರಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯವೂ ಶಿಕ್ಷಣ ವ್ಯವಸ್ಥೆಯಲ್ಲಿ ಮುಂಚೂಣ ಯಲ್ಲಿ ಸಾಗಬೇಕು ಎಂದ ಅವರು, ಶೈಕ್ಷಣ ಕ ವ್ಯವಸ್ಥೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು.

ಅದರಲ್ಲೂ ಮುಖ್ಯವಾಗಿ ಶತಮಾನ ಪೂರೈಸಿರುವ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅತ್ಯಗತ್ಯವಾಗಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕೌಶಲ್ಯಾಧಾರಿತ ಶಿಕ್ಷಣ ಪದ್ಧತಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವಾಗಿದೆ. ಶಿಕ್ಷಕರು ಈ ಹೊಸ ಶಿಕ್ಷಣ ವ್ಯವಸ್ಥೆಗೆ ಒಗ್ಗಿಕೊಂಡು ಭೋದನೆಯಲ್ಲಿ ತೊಡಗಬೇಕು ಎಂದರು.


ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಭವಿಷ್ಯದಲ್ಲಿ ಅಂಕಗಳ ಆಧಾರದಲ್ಲಿ ಉದ್ಯೋಗ ನೀಡುವ ವ್ಯವಸ್ಥೆ ಕಣ್ಮರೆಯಾಗಲಿದೆ. ಅಭ್ಯರ್ಥಿಗಳ ಕೌಶಲ್ಯಧಾರಿತವಾಗಿ ಉದ್ಯೋಗ ನೀಡುವ ವ್ಯವಸ್ಥೆ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟರು.


ಡಯಟ್ ಸಂಸ್ಥೆಯ ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳ ಶೈಕ್ಷಣ ಕ ಗುಣಮಟ್ಟ ಉತ್ತಮಪಡಿಸಲು ಹಾಗೂ ಶಿಕ್ಷಕರ ಮತ್ತು ಶೈಕ್ಷಣ ಕ ಅಧಿಕಾರಿಗಳ ಸಾಮಥ್ರ್ಯವನ್ನು ಅಭಿವೃದ್ಧಿ ಪಡಿಸುವ ಮೂಲಕ ಜಿಲ್ಲೆಯ ಶೈಕ್ಷಣ ಕ ಪ್ರಗತಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಮೂರು ವರ್ಷಗಳ ಅವಧಿಗೆ ಜಿಲ್ಲಾ ಶೈಕ್ಷಣ ಕ ಸಂವರ್ಧನಾ ಕಾರ್ಯಕ್ರಮ ಅನುಷ್ಟಾನಗೊಳಿಸಲು ನಾಲ್ಕು ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮ ರಾಜ್ಯದಲ್ಲಿ ಇದೇ ಪ್ರಥಮ ಪ್ರಯತ್ನವಾಗಿದೆ ಎಂದರು.


ಕೇರಿಂಗ್ ವಿತ್ ಕಲರ್ ಸಂಸ್ಥೆಯ ರಾಜೀವ್ ಅಲನೂರ್ ಮಾತನಾಡಿ, ಶೈಕ್ಷಣ ಕಾ ಸಂವರ್ಧನಾ ಕಾರ್ಯಕ್ರಮದಿಂದ ಉತ್ತಮ ಭೋದನೆ, ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಶೈಕ್ಷಣ ಕವಾಗಿ ಬಲವರ್ಧನೆಗೊಳಿಸಿ ಅನುಭವಾತ್ಮಕ ಕಲಿಕಾ ವಾತಾರವಣ ನಿರ್ಮಿಸಲಾಗುವುದು ಎಂದರು.
ಇಂಡಿಯಾ ಲಿಟರಸಿ ಪ್ರಾಜೆಕ್ಟ್‍ನ ಪ್ರಮೋದ್ ಶ್ರೀಧರ್ ಮೂರ್ತಿ ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಹತ್ತನೇ ತರಗತಿಯ ನಂತರದ ವಿದ್ಯಾರ್ಥಿಗಳ ಶೈಕ್ಷಣ ಕ ಭವಿಷ್ಯದ ಬಗ್ಗೆ ಮಾರ್ಗದರ್ಶನ ನೀಡಲಾಗುವುದು ಎಂದರು.


ಮಂತ್ರ ಫಾರ್ ಚೇಂಜ್‍ನ ರಫೀಕ್ ಮಾತನಾಡಿ, ಶೈಕ್ಷಣ ಕಾ ಸಂವರ್ಧನಾ ಕಾರ್ಯಕ್ರಮದಿಂದ ಜಿಲ್ಲೆಯ ಶೈಕ್ಷಣ ಕ ಪ್ರಗತಿ ಸಾಧ್ಯವಾಗಲಿದೆ ಎಂದರು.
ಐಐಎಂಬಿ ಸಂಸ್ಥೆಯ ಪೆÇ್ರ. ಗೋಪಾಲನಾಯ್ಕ್ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ನಂಜಯ್ಯ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಶಿಕ್ಷಣ ಅಧಿಕಾರಿ ರಂಗದಾಸಪ್ಪ ಸೇರಿದಂತೆ ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್‍ಸಿ, ಬಿಆರ್‍ಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಿಕ್ಷಕರ ತರಬೇತಿ ನಿರ್ವಹಣೆ ಹಾಗೂ ಕಲಿಕೆಯನ್ನು ಉತ್ತೇಜಿಸಲು ಟೀಚೋಪಿಯಾ ಆ್ಯಪ್ ಬಿಡುಗಡೆಗೊಳಿಸಿ, 1000 ಶಾಲೆಗಳಿಗೆ ವಿಜ್ಞಾನ ಪ್ರಯೋಗದ ಕಿಟ್ ವಿತರಣೆ ಮಾಡಲಾಯಿತು.


ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗೆ ಕೌತುಕಗಳ ಬಗ್ಗೆ ತಿಳಿಯಲು ಅನುಕೂಲವಾಗುವ ನಿಟ್ಟಿನಲ್ಲಿ ಸೈನ್ಸ್‍ಕಿಟ್‍ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಎಲ್ಲಾ ಶಿಕ್ಷಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಶಿಕ್ಷಕರ ವರ್ಗಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರದ ಮಟ್ಟದಲ್ಲಿ ಶಿಕ್ಷಕರ ವರ್ಗಾವಣೆ ಬಗ್ಗೆ ವಿವಿಧ ಹಂತಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ವೇಳೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ನ್ಯಾಯಲಯದಿಂದ ತಡೆ ಆದೇಶ ಇರುವ ಕಾರಣ ವಿಳಂಬವಾಗಿದೆ ಎಂದರು.


ರಾಜ್ಯದಲ್ಲಿ 1 ರಿಂದ 6ನೇ ತರಗತಿಗಳ ಪ್ರಾರಂಭಕ್ಕೆ ದಸರಾ ನಂತರ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಕೋವಿಡ್ ಮಾರ್ಗಸೂಚಿಗಳ ಅನುಸಾರ ಶಾಲಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕರಿಕೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಡೆದ ವಿದ್ಯುತ್ ಅವಘಡದಿಂದ ಮೃತ ಪಟ್ಟ ಶಾಲಾ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದರು.


ಕಾರ್ಯಕ್ರಮಕ್ಕೂ ಮುನ್ನ ಶಿಕ್ಷಣ ತಜ್ಞ ಗುರುರಾಜ್ ಕರಜಗಿ ಅವರಿಂದ ಹೊಸ ಶಿಕ್ಷಣ ನೀತಿ ಬಗ್ಗೆ ಉಪನ್ಯಾಸ ನೀಡಿದರು.

Share this post

About the author

Leave a Reply

Your email address will not be published. Required fields are marked *