ಪಿಎಸ್‍ಐ ಲಿಖಿತ ಪರೀಕ್ಷೆ.
ತುಮಕೂರು- ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ನಗರದ 11 ವಿವಿಧ ಶಾಲಾ-ಕಾಲೇಜುಗಳ ಪರೀಕ್ಷಾ ಕೇಂದ್ರಗಳಲ್ಲಿ ಲಖಿತ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.
ನಗರದ ಸಿದ್ದಗಂಗಾ ಮಹಿಳಾ ಕಾಲೇಜು, ಸಿದ್ದಾರ್ಥ ಕಾಲೇಜು ಸೇರಿದಂತೆ 11 ಕೇಂದ್ರಗಳ 295 ಕೊಠಡಿಗಳಲ್ಲಿ ನಡೆದ ಪಿಎಸ್‍ಐ ಲಿಖಿತ ಪರೀಕ್ಷೆಗೆ 5882 ಮಂದಿ ಅಭ್ಯರ್ಥಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 3 ಗಂಟೆಯಿಂದ ಪತ್ರಿಕೆ-2ರ ಪರೀಕ್ಷೆ ನಡೆಯಿತು.
ನಗರದ ಸಿದ್ದಗಂಗಾ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಡಿಷನಲ್ ಎಸ್ಪಿ ಟಿ.ಜೆ. ಉದೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.