ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ರಾಜೇಂದ್ರ
ತುಮಕೂರು- ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ರಾಜೇಂದ್ರ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಸಮಯ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಆರ್. ರಾಜೇಂದ್ರ ಅವರು ಆದಿಚುಂಚನಗಿರಿ ಮಠಕ್ಕೆ ತೆರಳಿ ಶ್ರೀಗಳೊಂದಿಗೆ ಚರ್ಚಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಕಲ್ಲಹಳ್ಳಿ ದೇವರಾಜು, ಚೌದ್ರಿ ರಂಗಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟ್ ಮಠ್, ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.