ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ರಾಜೇಂದ್ರ
ತುಮಕೂರು- ಮುಂಬರುವ ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ರಾಜೇಂದ್ರ ಅವರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಸಮಯ ಸನ್ನಿಹಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಆರ್. ರಾಜೇಂದ್ರ ಅವರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಚರ್ಚಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟ್ ಮಠ್ ಮತ್ತಿತರರು ಉಪಸ್ಥಿತರಿದ್ದರು.