breaking news

ಸತ್ಯಮಂಗಲ–ಬೀರನಕಲ್ಲು ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ: ಶಾಸಕ ಜ್ಯೋತಿಗಣೇಶ್, ಸುರೇಶ್‌ಗೌಡರಿಂದ ಚಾಲನೆ

ಸತ್ಯಮಂಗಲ–ಬೀರನಕಲ್ಲು ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ: ಶಾಸಕ ಜ್ಯೋತಿಗಣೇಶ್, ಸುರೇಶ್‌ಗೌಡರಿಂದ ಚಾಲನೆ
Road Development Boost in Tumakuru: MLAs Jyothiganesh and Suresh Gowda Launch Concrete Road Project

ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ 23ನೇ ವಾರ್ಡ್‌ನ ಸತ್ಯಮಂಗಲದಿಂದ ಬೀರನಕಲ್ಲುವರೆಗೆ 1360 ಅಡಿ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಹಾಗೂ ಬಿ. ಸುರೇಶ್‌ಗೌಡ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಸತ್ಯಮಂಗಲದಿಂದ ಬೀರನಕಲ್ಲುವರೆಗಿನ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು, ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆ ಇದೀಗ ಈಡೇರುತ್ತಿದ್ದು, ಸುಮಾರು ಅರ್ಧ ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಪ್ರಗತಿ ಪಥ ಯೋಜನೆಯಡಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಕಾಮಗಾರಿಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಿಂದ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಈ ಭಾಗದ ರಸ್ತೆಗಳಲ್ಲಿ ಹೈಮಾಸ್ಟ್ ದೀಪ ಹಾಗೂ ಬಸ್ ನಿಲ್ದಾಣ ನಿರ್ಮಾಣ ಮಾಡುವಂತೆ ಸಾರ್ವಜನಿಕರಿಂದ ಬೇಡಿಕೆ ಬಂದಿದ್ದು, ಇನ್ನೆರಡು-ಮೂರು ತಿಂಗಳಲ್ಲಿ ಹೈಮಾಸ್ಟ್ ದೀಪಗಳ ಅಳವಡಿಕೆ ಹಾಗೂ ಬಸ್ ನಿಲ್ದಾಣ ನಿರ್ಮಾಣ ಮಾಡಿಕೊಡುವುದಾಗಿ ಅವರು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ 23ನೇ ವಾರ್ಡ್ ವ್ಯಾಪ್ತಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಈ ವಾರ್ಡ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಅವರು ಸಹ ಸಹಕಾರ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಾಜಿ ಕಾರ್ಪೋರೇಟರ್ ವೆಂಕಟಪ್ಪ, ಮಾಜಿ ಟೂಡಾ ಸದಸ್ಯ ಸತ್ಯಮಂಗಲ ಜಗದೀಶ್, ಮುಖಂಡರಾದ ಅಣೆತೋಟ ಶ್ರೀನಿವಾಸ್, ಹನುಮಂತಪುರ ಹನುಮಂತರಾಜು ಹೆಚ್., ಬೀರನಕಲ್ಲು ಸತೀಶ್, ಟಿ.ಡಿ. ಕೃಷ್ಣಮೂರ್ತಿ, ಕೀರ್ತಿ, ಭರತ್, ವೈ.ಎನ್.ಡಿ. ಸಿದ್ದರಾಜು, ರುದ್ರೇಶ್, ರಮೇಶ್ ಯಲ್ಲಾಪುರ, ಕೋದಂಡರಾಮು ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು

Foundation Ceremony Held for Sathyamangala–Beeranakallu Concrete Road Construction

    Share this post

    About the author

    Leave a Reply

    Your email address will not be published. Required fields are marked *