ತುಮಕೂರು: ಅಕ್ಟೋಬರ್ 17ರಂದು ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಎಂ ವೆಂಕಟಸ್ವಾಮಿ ತಿಳಿಸಿದರು.
ತುಮಕೂರಿನ ಕನ್ನಡ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು ಪಕ್ಷ ಸಂಘಟನೆಗೆ ಹಾಗೂ ಇಂದಿನ ದಿನದಲ್ಲಿ ದೇಶದ ಜನರು ಅನುಭವಿಸಿರುವ ಆರ್ಥಿಕ ಹೊಡೆತ,ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಾರ್ವಜನಿಕರ ಹಕ್ಕುಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಕರ್ತರು,ಮುಖಂಡರ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಅವರು ತುಮಕೂರು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಸಲುವಾಗಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಇನ್ನು ಮುಂದಿನ ತಿಂಗಳು ನಡೆಯುವ ಕಾರ್ಯಕರ್ತರ ಸಮಾವೇಶಕ್ಕೆ ಜಿಲ್ಲಾ ಹಾಗೂ ತಾಲೂಕು ಗಳಿಂದ ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಚರ್ಚೆ ನಡೆಸಿದರು.
ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ತಿಮ್ಮಯ್ಯ, ಪ್ರಜಾ ವಿಮೋಚನಾ ಚಳುವಳಿಯ ರಾಜ್ಯ ಮುಖಂಡ ಬಸವರಾಜು ಇಂಡಲವಾಡಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಪಿಲ್ಲ ರಾಜು ಬೋಸಪ್ಪ , ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಗೌರವಾಧ್ಯಕ್ಷ ರಾಮಯ್ಯ, ತುಮಕೂರು ಜಿಲ್ಲಾ ಅಧ್ಯಕ್ಷ ನಟರಾಜು, ಸೇರಿದಂತೆ ವಿವಿಧ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದರು.