breaking news

ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯಸ್ಮರಣೆ: ಸಿದ್ದಗಂಗೆಯಲ್ಲಿ ನಾನಾ ಧರ್ಮದವರು ಭಾಗಿ

ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯಸ್ಮರಣೆ: ಸಿದ್ದಗಂಗೆಯಲ್ಲಿ ನಾನಾ ಧರ್ಮದವರು ಭಾಗಿ

ತುಮಕೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ
ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೬ನೇ ಪುಣ್ಯಸ್ಮರಣೆಯನ್ನು ಸಿದ್ದಗಂಗೆಯಲ್ಲಿದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.

ಶ್ರೀಕ್ಷೇತ್ರದಲ್ಲಿ ನಡೆದ ಶ್ರೀಗಳ ೬ನೇ ಪುಣ್ಯ ಸಂಸ್ಮರಣೋತ್ಸವಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮೇಘಾಲಯ
ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಸೇರಿದಂತೆ ವಿವಿಧ ಮಠಾಧೀಶರುಗಳು, ಹರಗುರುಚರಮೂರ್ತಿಗಳು ಹಾಗೂ ಸಹಸ್ರಾರು ಭಕ್ತ ಸಮೂಹ
ಶ್ರೀಗಳ ಗದ್ದುಗೆ ದರ್ಶನ ಪಡೆದು ಸಾಕ್ಷಿಯಾದರು. ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ನಸುಕಿನಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ವೇದ ಘೋಷಗಳು ಮೊಳಗಿದವು. ಶ್ರೀಗಳ ೬ನೇ ಪುಣ್ಯಾರಾಧನೆ ಪ್ರಯುಕ್ತ ಶ್ರೀಗಳು ಐಕ್ಯರಾಗಿರುವ ಶಿವಯೋಗಿ ಮಂದಿರ ಬಗೆ ಬಗೆಯ ಪುಷ್ಪಗಳಿಂದ ಅಲಂಕೃತಗೊAಡು ಕAಗೊಳಿಸುತ್ತಿದ್ದು, ಶ್ರೀಗಳ ಗದ್ದುಗೆಯನ್ನು ವಿವಿಧ ಪುಷ್ಪ, ಹಣ್ಣು ಹಂಪಲುಗಳಿAದ ವಿಶೇಷವಾಗಿ ಸಿಂಗರಿಸಲಾಗಿದ್ದು, ವಿದ್ಯುತ್ ದೀಪಾಲಂಕಾರದೊAದಿಗೆ ಸಿದ್ದಗAಗಾ ಮಠ ಕಂಗೊಳಿಸುತ್ತಿದೆ.

ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸಿದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯಲ್ಲಿ ಪೂಜಾ ವಿಧಾನಗಳಾದ ಮಹಾರುದ್ರಾಭಿಷೇಕ, ರಾಜೋಪಚಾರ, ಬಿಲ್ವಾರ್ಚನೆಯೊಂದಿಗೆ ನೆರವೇರಿದವು. ಹಲವು ಮಠಾಧೀಶರುಗಳು, ಹರಗುರುಚರಮೂರ್ತಿಗಳು ನಸುಕಿನಲ್ಲೆ ಆರಂಭವಾದ ಶ್ರೀಗಳ ಗದ್ದುಗೆ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ಶ್ರೀಗಳ ಭಾವಚಿತ್ರ ಮೆರವಣಿಗೆ ಶ್ರೀಮಠದ ಆವರಣದಲ್ಲಿ ಸುಮಂಗಲಿಯರು ಹೊತ್ತ ೧೦೮ ಕಳಸಗಳೊಂದಿಗೆ ರುದ್ರಾಕ್ಷಿ ಮಂಟಪದಲ್ಲಿ ಲಿಂಗೈಕ್ಯ ಶ್ರೀಗಳ ಭಾವಚಿತ್ರ ಮೆರವಣಿಗೆ ವೈಭವಯುತವಾಗಿ ನಡೆಯಿತು. ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಭಾವಚಿತ್ರ ಮೆರವಣಿಗೆಯು ಶ್ರೀಗಳ
ಗದ್ದುಗೆ ಮಂದಿರದಿAದ ಆರಂಭವಾಗಿ ವಸ್ತುಪ್ರದರ್ಶನದ ಆವರಣದವರೆಗೆ ಸಾಗಿತು. ಮತ್ತೆ ವಸ್ತು ಪ್ರದರ್ಶನದ ಆವರಣದಿಂದ ಗದ್ದುಗೆ ಮಂದಿರದ
ವರೆಗೆ ಮೆರವಣಿಗೆಯು ಸಾಗಿ ಅಂತ್ಯಗೊಂಡಿತು.

ಈ ಮೆರವಣಿಗೆಯುದ್ದಕ್ಕೂ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೆಆರ್‌ಡಿಎಲ್ ಮಾಜಿ ಅಧ್ಯಕ್ಷ ರುದ್ರೇಶ್, ಹೆಚ್.ಎನ್. ದೀಪಕ್ ಸೇರಿದಂತೆ ಹರಗುರುಚರಮೂರ್ತಿಗಳು, ಭಕ್ತಾದಿಗಳು, ಶಾಲಾ ಮಕ್ಕಳು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
ಶ್ರೀಗಳ ಭಾವಚಿತ್ರ ಮೆರವಣಿಗೆಯಲ್ಲಿ ಕರಡಿ ವಾದ್ಯ, ನಂದಿಧ್ವಜ ಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಹಾಗೂ ವಾದ್ಯ ಮೇಳಗಳು ಪಾಲ್ಗೊಂಡು ಮೆರಗು ನೀಡಿದವು. ೬ ಕಡೆ ದಾಸೋಹ ಶ್ರೀಗಳ ೬ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಶ್ರೀಮಠದ ೬ ಕಡೆಗಳಲ್ಲಿ ಲಕ್ಷಾಂತರ ಭಕ್ತಾದಿಗಳಿಗಾಗಿ ಬಗೆ ಬಗೆಯ ಖಾದ್ಯಗಳೊಂದಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ.

ಶ್ರೀಮಠದ ಕೈಗಾರಿಕಾ ವಸ್ತುಪ್ರದರ್ಶನದ ಆವರಣ, ಸಾದರ ಕೊಪ್ಪಲು, ಕೆಂಪಹೊನ್ನಯ್ಯ, ಅತಿಥಿಗೃಹ, ಹೊಸ ಪ್ರಸಾದ ನಿಲಯ, ಹಳೆ ಪ್ರಸಾದ ನಿಲಯ ಸೇರಿದಂತೆ ೬ ಕಡೆ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಬೆಳಗಿನ ಉಪಹಾರ ಉಪ್ಪಿಟ್ಟು, ಕೇಸರಿಬಾತ್, ಮಧ್ಯಾಹ್ನ ಚಿತ್ರಾನ್ನ, ಪಾಯಸ, ಸಿಹಿ ಬೂಂದಿ, ಖಾರಬೂಂದಿ, ಅನ್ನಸಾAಬರು, ಮಾಲ್ದಿ, ಬೂಂದಿ, ಖಾರ ಬೂಂದಿ, ಮೈಸೂರು ಪಾಕ್ ಸೇರಿದಂತೆ ವಿವಿಧ ಖಾದ್ಯಗಳನ್ನು ಭಕ್ತರು ಸವಿದು ಪುನೀತರಾದರು.

ಮುಂಜಾನೆಯಿಂದಲೇ ನಾಡಿನ ವಿವಿಧೆಡೆಯಿಂದ ಧಾವಿಸಿದ್ದ ಸಹಸ್ರಾರು ಭಕ್ತರು ಸರದಿಯ ಸಾಲಿನಲ್ಲಿ ನಿಂತು ಶ್ರೀಗಳ ಗದ್ದುಗೆ ದರ್ಶನ ಪಡೆದರು. ಶ್ರೀಮಠದಲ್ಲಿ ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಡಿಷನಲ್ ಎಸ್ಪಿ ವಿ. ಮರಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Shivakumara Swamiji’s 6th Commemoration: People of Different Religions Participate in Siddaganga

Share this post

About the author

Leave a Reply

Your email address will not be published. Required fields are marked *