breaking news

ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಎಸ್.ಎಂ. ಇರ್ಫಾನ್ ನೇಮಕ

ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಎಸ್.ಎಂ. ಇರ್ಫಾನ್ ನೇಮಕ

ತುಮಕೂರು: ಫೆಬ್ರವರಿ 24: ಕಾಂಗ್ರೆಸ್ ಪಕ್ಷದ ಮುಖಂಡರಾದ ಶೇಕ್ ಮಹಮ್ಮದ್ ಇರ್ಫಾನ್ (ಎಸ್.ಎಂ. ಇರ್ಫಾನ್) ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಎಸ್.ಎಂ. ಇರ್ಫಾನ್ ಅವರು, ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ನನ್ನನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದು ನನ್ನ ಮೇಲೆ ಇನ್ನಷ್ಟು ಜವಾಬ್ದಾರಿಗಳು ಹೆಚ್ಚಾಗಿರುವುದಾಗಿ ತಿಳಿಸಿದ್ದಾರೆ.ಈ ನೇಮಕಾತಿಯಿಂದ ತಮಗೆ ಇನ್ನಷ್ಟು ಜವಾಬ್ದಾರಿಗಳು ಹೆಚ್ಚಾಗಿದ್ದು, ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿ ನಿಭಾಯಿಸಿರುವ ಅನುಭವ ಹೊಂದಿದ್ದೇನೆ ಎಂದು ತಿಳಿಸಿದರು.ಮುಂದಿನ ದಿನಗಳಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜೊತೆಗೆ ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಹೋರಾಟ ನಡೆಸುವ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಸಹಕಾರದಿಂದ ತುಮಕೂರು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರೊಂದಿಗೆ, ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಎಸ್.ಎಂ. ಇರ್ಫಾನ್ ತಿಳಿಸಿದ್ದಾರೆ.ಈ ನೇಮಕಾತಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

SM Irfan Appointed as Tumkur District Congress Minority Unit Chairman

Share this post

About the author

Leave a Reply

Your email address will not be published. Required fields are marked *