ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ತುಮಕೂರಿನ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡುವ ಮುನ್ನ ನಗರದ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಠದ ವಿದ್ಯಾರ್ಥಿಗಳೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ವೇಳೆ ಶಾಸಕ ಜ್ಯೋತಿಗಣೇಶ್, ಶಿವಕುಮಾರಯ್ಯ ಸೇರಿದಂತೆ ಇತರರಿದ್ದರು.